ಚಂದಾ ಕೊಚ್ಚರ್ ಖಾಸಗಿ ವಲಯದ ಬ್ಯಾಂಕ್‌ನ ಮುಖ್ಯಸ್ಥರಾಗಿದ್ದಾಗ ವಿಡಿಯೋಕಾನ್ ಗ್ರೂಪ್‌ಗೆ ಒದಗಿಸಿದ 3,000 ಕೋಟಿ ರೂ. ಹೆಚ್ಚು ಸಾಲದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಡಿಸೆಂಬರ್ 23 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರನ್ನು ಬಂಧಿಸಿತ್ತು.
ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ತನ್ನ ಬಂಧನ ಕಾನೂನುಬಾಹಿರವಾಗಿದೆ. ತನಿಖೆ ಆರಂಭಿಸಲು ಕಾಯಿದೆಯ ಸೆಕ್ಷನ್ 17A ಅಡಿಯಲ್ಲಿ ಅನುಮತಿ ಕಡ್ಡಾಯವಾಗಿದೆ ಹಾಗೂ ಈ ತನಿಖೆಯನ್ನು ಪ್ರಾರಂಭಿಸಲು ಸಂಸ್ಥೆಯು ಅಂತಹ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ಕೊಚ್ಚರ್ ದಂಪತಿ ನ್ಯಾಯಾಲಯದ ಮುಂದೆ ವಾದಿಸಿದರು.
Read E-Paper click here