Saturday, 14th December 2024

ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್‌ ಲೈನ್ ಲೋಕಾರ್ಪಣೆ

ನವದೆಹಲಿ: ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್‌ ಲೈನ್ ಲೋಕಾರ್ಪಣೆ ಮಾಡಿ, ”ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್” ಅಡಿಯಲ್ಲಿ ಈ ಪೈಪ್ ಲೈನ್ ಪ್ರಮುಖ ಮೈಲಿಗಲ್ಲಾಗಿದೆ. 450 ಕಿ. ಮೀ ದೂರದ ಮಾರ್ಗ ಕರ್ನಾಟಕ -ಕೇರಳ ರಾಜ್ಯ ಹಾಗೂ ದೇಶಕ್ಕೆ ಹೊಸ ಹಾದಿ ಹಾಕಿ ಕೊಡಲಿದೆ ಎಂದು ಹೇಳಿದರು.

ಬಳಿಕ ಮಾತನಾಡಿ, 450 ಕಿ.ಮೀ ಉದ್ದದ ನೈಸರ್ಗಿಕ ಪೈಪ್‌ಲೈನ್ ಅನ್ನು ರಾಷ್ಟ್ರಕ್ಕೆ ಲೋಕಾರ್ಪಣೆ ಮಾಡುತ್ತಿರುವುದು ಗೌರವದ ವಿಚಾರ. ಇದು ಭಾರತಕ್ಕೆ, ವಿಶೇಷವಾಗಿ ಕರ್ನಾಟಕ ಮತ್ತು ಕೇರಳದ ಜನರಿಗೆ ಮಹತ್ವದ ದಿನವಾಗಿದೆ ಎಂದು ಹೇಳಿದರು.

ದಶಕಗಳ ಹಿಂದಿನ ಭಾರತದ ಪ್ರಗತಿಯ ರೇಟಿಂಗಳ ಬಗ್ಗೆ ಮಾತನಾಡುವುದಿಲ್ಲ. ಈಗಂತೂ ಭಾರತ ನಿಧಾನಗತಿಯಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಇತ್ತೀಚಿನ ಕೆಲವು ವರ್ಷಗಳಲ್ಲಿ ಭಾರತವು ತನ್ನ ವೇಗ, ಪ್ರಮಾಣ ಮತ್ತು ಅಭಿವೃದ್ಧಿ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಎಂದು ತಿಳಿಸಿದ್ದಾರೆ. ಇದು ಭಾರತಕ್ಕೆ, ವಿಶೇಷವಾಗಿ ಕರ್ನಾಟಕ ಮತ್ತು ಕೇರಳದ ಜನರಿಗೆ ಮಹತ್ವದ ದಿನವಾ ಗಿದೆ ಎಂದು ಹೇಳಿದ್ದಾರೆ.

ಸಮಾರಂಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರೊಂದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.