Thursday, 12th December 2024

ಕೊಲ್ಲಾಪುರದಲ್ಲಿ ನಿಷೇಧಾಜ್ಞೆ ಜಾರಿ

ಕೊಲ್ಲಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಮಹಾರಾಷ್ಟ್ರ ಭಾಗದಲ್ಲಿ ಪ್ರತಿಭಟನೆ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೊಲ್ಲಾಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.

ಗಡಿ ವಿವಾದ ವಿಚಾರವಾಗಿ ಮಹಾವಿಕಾಸ್ ಅಘಾಡಿ ಕಾರ್ಯಕರ್ತರು ಧರಣಿ ನಡೆಸು ತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಲ್ಲಾಪುರದಲ್ಲಿ ಡಿ.23ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಹಾವಿಕಾಸ್ ಅಘಾಡಿ ಕಾರ್ಯಕರ್ತರ ಧರಣಿ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದ್ದು, ಮುಂಜಾಗೃತಾ ಕ್ರಮವಾಗಿ ಡಿ.9ರಿಂದ ಡಿಸೆಂಬರ್ 23ರವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.