ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆರ್‌ಜಿ ಕರ್ ಮೆಡಿಕಲ್ ಕಾಲೇಜಿ(RG Kar College)ನಲ್ಲಿ ನಡೆದ ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣ(Kolkata Doctor Murder) ಪ್ರತಿಭಟನೆ ನಡೆಸುತ್ತಿರುವ ವೈದ್ಯರ ಮನವೊಲಿಸಲು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ(Mamata Banerjee) ಕೊನೆಯ ಹಂತದ ಕಸರತ್ತು ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಮಮತಾ ಬ್ಯಾನರ್ಜಿ ಭೇಟಿ ಕೊಟ್ಟ ಬೆನ್ನಲ್ಲೇ ಅವರ ಜತೆ ಮಾತುಕತೆಗೆ ವೈದ್ಯರ ತಂಡ ಮುಂದಾಗಿದೆ.
ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರ ನಿಯೋಗ, ತಮ್ಮ ಬೇಡಿಕೆಗಳ ಕುರಿತು ಸಿಎಂ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತುಕತೆ ನಡೆಸಲು ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸಿದೆ.
#WATCH | Kolkata, West Bengal: A delegation of junior doctors protesting over the RG Kar Medical College and Hospital rape-murder case, arrive at the Chief Minister's residence to attend a meeting with CM Mamata Banerjee regarding their demands. pic.twitter.com/GMXiKWu1Zs
— ANI (@ANI) September 14, 2024
ಇದಕ್ಕೂ ಮುನ್ನ ವೈದ್ಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಇಂದು ಸಿಎಂ ಮಮತಾ ಬ್ಯಾನರ್ಜಿ ದಿಢೀರ್ ಭೇಟಿ ಕೊಟ್ಟಿದ್ದರು. ಸ್ವಾಸ್ಥ್ಯ ಭವನದ ಎದುರು ಪ್ರತಿಭಟನೆ ನಡೆಸುತ್ತಿರುವ ವೈದ್ಯರ ಮನವೊಲಿಸಲು ಯತ್ನಿಸಿದ ದೀದಿ, ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಈ ಬಗ್ಗೆ ವೈದ್ಯರು ಪ್ರತಿಕ್ರಿಯಿಸಿದ್ದು, ಸಿಎಂ ಮಮತಾ ಬ್ಯಾನರ್ಜಿ ಅವರು ನಮ್ಮ ಪ್ರತಿಭಟನಾ ಸ್ಥಳಕ್ಕೆ ಬಂದಿದ್ದರು. ಎರಡೂ ಕಡೆಯಿಂದ ಚರ್ಚೆ ಮತ್ತು ಸಂವಾದಕ್ಕೆ ಅವಕಾಶ ನೀಡಿರುವು ನಮಗೆ ಸಂತೋಷ ತಂದಿದೆ. ಇದಕ್ಕಾಗಿ ಸಿಎಂ ಕಚೇರಿಗೆ ಮೇಲ್ ಕೂಡ ಕಳುಹಿಸಿದ್ದು, ಅವರು ಬಂದಿದ್ದಕ್ಕೆ ನಮಗೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದ್ದೇವೆ. ಅಲ್ಲದೇ ಪಶ್ಚಿಮ ಬಂಗಾಳದ ಜೂನಿಯರ್ ಡಾಕ್ಟರ್ಸ್ ಫ್ರಂಟ್ ನೀಡಿರುವ ಐದು ಅಂಶಗಳ ಬೇಡಿಕೆಗಳ ಬಗ್ಗೆ ಸಿಎಂ ಚರ್ಚಿಸಲು ನಾವು ಸಿದ್ಧರಿದ್ದೇವೆ ಎಂದು ಪ್ರತಿಭಟನಾಕಾರರಲ್ಲಿ ಒಬ್ಬರಾದ ಡಾ ಆರಿಫ್ ಹೇಳಿದರು.
ಇಂದು ಪ್ರತಿಭನಾ ಸ್ಥಳದಲ್ಲಿ ವೈದ್ಯರನ್ನು ಭೇಟಿ ಮಾಡಿದ ಮಮತಾ, ನಾನಿಂದು ಸಿಎಂ ಆಗಿ ಇಲ್ಲಿ ಬಂದಿಲ್ಲ. ಬದಲಾಗಿ ನಿಮ್ಮ ಹಿರಿಯ ಸಹೋದರಿಯಾಗಿ ಬಂದಿದ್ದೇನೆ ಎನ್ನುತ್ತಲೇ ವೈದ್ಯರ ಜತೆ ಮಾತು ಆರಂಭಿಸಿದ ದೀದಿ, ನೀವು ನಡು ರಸ್ತೆಯಲ್ಲಿ ಮಳೆ ಬಿಸಿಲನ್ನು ಲೆಕ್ಕಿಸದೇ ಪ್ರತಿಭಟನೆ ನಡೆಸುತ್ತಿದ್ದರೆ ನಾನು ಅಲ್ಲಿ ಅದೆಷ್ಟೋ ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ. ನಾನು ನಿಮ್ಮ ಬೇಡಿಕೆಗಳ ಬಗ್ಗೆ ಅಧ್ಯಯನ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುತ್ತೇನೆ ಎಂದು ನಿಮಗಿಂದು ನಾನು ಭರವಸೆ ನೀಡುತ್ತಿದ್ದೇನೆ ಎಂದಿದ್ದರು.
ಈ ಸುದ್ದಿಯನ್ನೂ ಓದಿ: Mamata Banerjee : ವೈದ್ಯರ ಅಸಹಾಕಾರ; ರಾಜೀನಾಮೆ ನೀಡಲು ಮುಂದಾದ ಮಮತಾ ಬ್ಯಾನರ್ಜಿ!