ನವದೆಹಲಿ: ಸಿಸಿಟಿವಿ ಅಳವಡಿಕೆ ಮತ್ತು ವೈದ್ಯಕೀಯ ಕೇಂದ್ರಗಳಲ್ಲಿ ಶೌಚಾಲಯಗಳು ಮತ್ತು ಪ್ರತ್ಯೇಕ ವಿಶ್ರಾಂತಿ ಕೊಠಡಿಗಳ ನಿರ್ಮಾಣದಲ್ಲಿ ನಿಧಾನಗತಿಯ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಮಮತಾ ಬ್ಯಾನರ್ಜಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಕೋಲ್ಕತಾದ ಆರ್.ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಗೆ (Kolkata murder Case) ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರ ನ್ಯಾಯಪೀಠ ನಡೆಸಿತು. ಈ ವೇಳೆ ಸರ್ಕಾರದ ಕ್ರಮವನ್ನು ತರಾಟೆಗೆ
ಪಿಟಿಐ ವರದಿಯ ಪ್ರಕಾರ ಅಕ್ಟೋಬರ್ 15ರೊಳಗೆ ವೈದ್ಯಕೀಯ ಕೇಂದ್ರಗಳಲ್ಲಿ ನಡೆಯುತ್ತಿರುವ ಕೆಲಸವನ್ನು ಪೂರ್ಣಗೊಳಿಸುವಂತೆ ನ್ಯಾಯಪೀಠವು ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ವಿಚಾರಣೆಯ ವೇಳೆ ವಕೀಲರಾದ ವೃಂದಾ ಗ್ರೋವರ್ ಅವರು. ಅತ್ಯಾಚಾರ ಸಂತ್ರಸ್ತೆಯ ಹೆಸರು ಮತ್ತು ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗಪಡಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ವಿಷಯದ ಬಗ್ಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಆದೇಶವನ್ನು ಜಾರಿಗೆ ತರುವುದು ಕಾನೂನು ಜಾರಿ ಸಂಸ್ಥೆಗಳಿಗೆ ಬಿಟ್ಟದ್ದು ಎಂದು ಸುಪ್ರೀಂ ಕೋರ್ಟ್ ಹೇಳಿತು.
ಮಹತ್ವದ ಸುಳಿವುಗಳು ಹೊರಬಂದಿವೆ: ಸುಪ್ರೀಂ ಕೋರ್ಟ್
ವಿಚಾರಣೆಯ ಸಮಯದಲ್ಲಿ, ಉನ್ನತ ನ್ಯಾಯಾಲಯದ ಪೀಠವು ಅತ್ಯಾಚಾರ ಮತ್ತು ಕೊಲೆ ಮತ್ತು ಆರ್ಥಿಕ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಯಲ್ಲಿ ಗಣನೀಯ ಸುಳಿವುಗಳು ಸಿಕ್ಕಿವೆ ಎಂದು ಹೇಳಿದರು. ಆರ್.ಜಿ.ಕಾರ್ ಆಸ್ಪತ್ರೆಯಲ್ಲಿ ಹಣಕಾಸು ಅವ್ಯವಹಾರದ ಆರೋಪದ ತನಿಖೆ ಕುರಿತು ರಾಜ್ಯ ಸರ್ಕಾರದೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳುವಂತೆ ಸಿಬಿಐಗೆ ಸೂಚಿಸಿತು.
ಇದನ್ನೂ ಓದಿ: Pralhad Joshi: ಮಮತಾ ಬ್ಯಾನರ್ಜಿ ಡ್ರಾಮಾ ಬಿಟ್ಟು ರಾಜೀನಾಮೆ ನೀಡಲಿ : ಪ್ರಲ್ಹಾದ್ ಜೋಶಿ
ವಿಚಾರಣೆಯ ಸಮಯದಲ್ಲಿ, ವೈದ್ಯರು ಒಳರೋಗಿ ವಿಭಾಗ ಮತ್ತು ಹೊರರೋಗಿ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಆರೋಪಿಸಿತು. ಈ ವೇಳೆ ವೈದ್ಯರ ಪರ ವಕೀಲೆ ಇಂದಿರಾ ಜೈಸಿಂಗ್ ಅವರು ಅದಕ್ಕೆ ಅಕ್ಷೇಪ ವ್ಯಕ್ತಪಡಿಸಿದರು. ಎಲ್ಲಾ ಅಗತ್ಯ ಮತ್ತು ತುರ್ತು ಸೇವೆಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.