ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನವದೆಹಲಿಯ ಆರ್ಮಿ ರಿಸರ್ಚ್ ಅಂಡ್ ರೆಫರಲ್ ಆಸ್ಪತ್ರೆ ತಿಳಿಸಿದೆ.
ರಾಷ್ಟ್ರಪತಿಗಳು ದೈನಂದಿನ ಪರೀಕ್ಷೆಗೆ ಒಳಪಡಿದ್ದು, ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ‘ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನವದೆಹಲಿಯ ಸೇನಾ ಆಸ್ಪತ್ರೆಗೆ (ಆರ್ ಆಯಂಡ್ ಆರ್) ದಾಖಲಿಸಲಾಗಿದೆ.
ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆರ್ ಆಯಂಡ್ ಆರ್ ಆಸ್ಪತ್ರೆಯ ವೈದ್ಯಕೀಯ ವರದಿ ತಿಳಿಸಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ