Saturday, 14th December 2024

ಸ್ಟ್ಯಾಂಡ್-ಅಪ್’ ಕಾಮಿಡಿಯನ್ ಕಾಮ್ರಾ, ಕುಟುಂಬಸ್ಥರಿಗೆ ಕೊರೊನಾ ಸೋಂಕು ದೃಢ

ಮುಂಬೈ: ‘ಸ್ಟ್ಯಾಂಡ್-ಅಪ್’ ಕಾಮಿಡಿಯನ್ ಕುನಾಲ್ ಕಾಮ್ರಾ ಮತ್ತು ಆತನ ಕುಟುಂಬಕ್ಕೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹಾಸ್ಯನಟ ಹೋಂ ಕ್ವಾರಂಟೈನ್‌ನಲ್ಲಿದ್ದರೆ, ಅವರ ಪೋಷಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗೆ ತಮ್ಮೊಂದಿಗೆ ಸಂಪರ್ಕಕ್ಕೆ ಬಂದಿದ್ದವರಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿರುವುದಾಗಿ ಕಾಮ್ರಾ ತಿಳಿಸಿದ್ದಾರೆ.

ಹೆತ್ತವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಮತ್ತು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ನನಗೂ ಸೋಂಕು ತಗುಲಿರುವುದರಿಂದಾಗಿ ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದೇನೆ. ನಾನು ಮತ್ತು ನನ್ನ ಕುಟುಂಬ ಶೀಘ್ರದಲ್ಲೇ ಗುಣಮುಖರಾಗು ತ್ತೇವೆ. ದಯವಿಟ್ಟು ಎರಡನೇ ಕೋವಿಡ್ ಅಲೆಯನ್ನು ತುಂಬಾ ಗಂಭೀರವಾಗಿ ಪರಿಗಣಿಸಿ ಮತ್ತು ಜಾಗರೂಕರಾಗಿರಿ’ ಎಂದು ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ.

ಮುಂಬೈನಲ್ಲಿ ಸೋಮವಾರ 9,857 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆಯು 4,62,302ಕ್ಕೆ ಏರಿಕೆ ಯಾಗಿದೆ.