Thursday, 12th December 2024

ಗುಂಡಿನ ಚಕಮಕಿ: ಉಗ್ರನ ಹತ್ಯೆ, ಯೋಧನಿಗೆ ಗಂಭೀರ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಸೇನೆ ಮತ್ತು ಉಗ್ರರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಉಗ್ರನೊಬ್ಬನನ್ನು ಹೊಡೆದು ರುಳಿಸುವಲ್ಲಿ ಸೇನೆ ಯಶಸ್ವಿ ಆಗಿದ್ದು, ಯೋಧನಿಗೆ ಗಂಭೀರ ಗಾಯಗಳಾಗಿವೆ.

ಕುಪ್ವರಾ ಜಿಲ್ಲೆಯ ಕೊವುಟ್‌ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕ ಮೇರೆಗೆ ಸೇನೆ ಮತ್ತು ಪೊಲೀಸರು ಜಂಟೀ ಶೋಧ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು.

ಸೇನೆ ಮೇಲೆ ಉಗ್ರರು ಏಕಾಏಕಿ ದಾಳಿ ನಡೆಸಿದ್ದರು. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬರು ಯೋಧನಿಗೆ ಗಾಯಗಳಾಗಿವೆ. ಘಟನೆಯಲ್ಲಿ ಉಗ್ರನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ. ಇನ್ನು ಶೋಧಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.