ನವದೆಹಲಿ: ಉತ್ತರ ಪ್ರದೇಶದ ಕುಶಿನಗರದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು.
ಈ ವಿಮಾನ ನಿಲ್ದಾಣವು ಶ್ರಾವಸ್ತಿ, ಕಪಿಲ್ವಾಸ್ತು, ಲುಂಬಿನಿ (ಕುಶಿನಗರವು ಬೌದ್ಧ ಸಾಂಸ್ಕೃತಿಕ ತಾಣ) ನಂತಹ ಹಲವಾರು ಬೌದ್ಧ ಸಾಂಸ್ಕೃತಿಕ ತಾಣಗಳ ಹತ್ತಿದಲ್ಲಿದೆ. ಕುಶಿನಗರ ವಿಮಾನ ನಿಲ್ದಾಣವನ್ನು “ಅಂತರಾಷ್ಟ್ರೀಯ ವಿಮಾನ ನಿಲ್ದಾಣ” ವಾಗಿ ಘೋಷಣೆ ಮಾಡಿರುವುದು ಇತರೆ ರಾಷ್ಟ್ರಗಳೊಂದಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಅಲ್ಲದೆ, ದೇಶೀಯ/ಅಂತರಾಷ್ಟ್ರೀಯ ಪ್ರವಾಸೋದ್ಯಮ ಮತ್ತು ಪ್ರದೇಶಗಳ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ.
ರೈತರು, ಪಶು ಪಾಲಕರು, ಅಂಗಡಿಯವರು, ಕಾರ್ಮಿಕರು, ಸ್ಥಳೀಯ ಕೈಗಾರಿಕೋದ್ಯಮಿಗಳು ಸೇರಿದಂತೆ ಎಲ್ಲರಿಗೂ ಪ್ರಯೋಜನ ವನ್ನು ನೀಡುತ್ತದೆ. ವ್ಯಾಪಾರದ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ. ಪ್ರವಾಸೋದ್ಯಮವು ಗರಿಷ್ಠ ಲಾಭವನ್ನು ಪಡೆಯುತ್ತದೆ, ಅಲ್ಲದೆ, ಇಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಕುಶಿನಗರ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಘೋಷಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯ ಕೇಂದ್ರ ಸಂಪುಟ ಜೂನ್ 2020 ರಲ್ಲಿ ಅನುಮೋದನೆ ನೀಡಿತ್ತು.