ರೇವಾ ಜಿಲ್ಲಾ ಕೇಂದ್ರದಿಂದ 40 ಕಿ.ಮೀ. ದೂರದಲ್ಲಿರುವ ಸಿರ್ಮೌರ್ ಪೊಲೀಸ್ ಠಾಣಾ ವ್ಯಾಪ್ತಿಯ ಡೊಲ್ಮಾವು ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಪೊಲೀ ಸರು ಹೇಳಿದರು.
ಪರಿಶಿಷ್ಟ ಜಾತಿಗೆ ಸೇರಿದ ಸಂತ್ರಸ್ತ ಅಶೋಕ್ ಸಾಕೇತ್, ಪಾಡ್ರಿ ಗ್ರಾಮದ ನಿವಾಸಿ. ಡೊಲ್ಮಾವು ಗ್ರಾಮದ ಗಣೇಶ ಮಿಶ್ರಾ ಅವರ ನಿರ್ಮಾಣ ಕೆಲಸದಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದರು. ಬಾಕಿ ಕೂಲಿಯ ಸಂಬಂಧ ಸಾಕೇತ್ ಮತ್ತು ಮಿಶ್ರಾ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಮಿಶ್ರಾ ಮತ್ತು ಆತನ ಕಡೆಯವರು ಹರಿತ ಆಯುಧದಿಂದ ಸಾಕೇತ್ ಮೇಲೆ ಹಲ್ಲೆ ನಡೆಸಿದ್ದಾರೆ. ಮಿಶ್ರಾ ಸಾಕೇತ್ ಕೈ ಕತ್ತರಿಸಿದ್ದಾರೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ಶಿವಕುಮಾರ್ ವರ್ಮಾ ಹೇಳಿದರು.
ಗಾಯಗೊಂಡ ಕಾರ್ಮಿಕನನ್ನು ಪೊಲೀಸರು ಸಂಜಯ ಗಾಂಧಿ ಸ್ಮಾರಕ ಆಸ್ಪತ್ರೆಗೆ ರವಾನಿಸಿದರು. ಅಲ್ಲಿಯ ವೈದ್ಯರ ತಂಡ ಶಸ್ತ್ರ ಚಿಕಿತ್ಸೆಯ ಮೂಲಕ ಕಾರ್ಮಿಕನಿಗೆ ಕೈಯನ್ನು ಮರುಜೋಡಿಸಿದರು. ಬಹಳ ರಕ್ತ ಹೋಗಿದ್ದರಿಂದ ಕಾರ್ಮಿಕನ ಸ್ಥಿತಿ ಗಂಭೀರ ವಾಗಿದೆ ಎಂದು ಶಿವಕುಮಾರ್ ಹೇಳಿದರು.