Thursday, 12th December 2024

ಅಗ್ನಿ ದುರಂತ: ಆಮ್ಲಜನಕ ಕೊರತೆಯಿಂದ ರೋಗಿ ಸಾವು

ನವದೆಹಲಿ: ರೋಹಿಣಿ ಪ್ರದೇಶದ ಆಸ್ಪತ್ರೆಯಲ್ಲಿ ಶನಿವಾರ ಬೆಂಕಿ ಕಾಣಿಸಿ ಕೊಂಡಿದ್ದು ಆಮ್ಲಜನಕ ವ್ಯವಸ್ಥೆಗೆ ಅಡ್ಡಿಯಾಗಿ ರೋಗಿ ಮೃತಪಟ್ಟಿದ್ದಾರೆ.

ಪೂತ್ ಖುರ್ದ್‌ನ ಬ್ರಹ್ಮ ಶಕ್ತಿ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ಪ್ರಣವ್ ತಯಾಲ್ ತಿಳಿಸಿದ್ದಾರೆ.

ಒಬ್ಬ ರೋಗಿಯನ್ನು ಹೊರತುಪಡಿಸಿ ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದೆ, ಅವರನ್ನು ಐಸಿಯುಗೆ ದಾಖಲಿಸಲಾಗಿದೆ ಮತ್ತು ವೆಂಟಿಲೇಟರ್ ಬೆಂಬಲದಲ್ಲಿರಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಮೇ 27 ರಂದು ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮತ್ತು ನಗರದ ಪೂರ್ವ ಭಾಗದಲ್ಲಿರುವ ಮಕ್ಕರ್ ಮಲ್ಟಿ ಸ್ಪೆಷಾ ಲಿಟಿ ಆಸ್ಪತ್ರೆಯಲ್ಲಿ ಬೆಂಕಿಯ ಇಂಥಹದ್ದೇ ಘಟನೆ ವರದಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.