Friday, 13th December 2024

ಕಾಲೇಜು ಆವರಣದಲ್ಲಿಯೇ ಯುವತಿಯ ಗುಂಡಿಟ್ಟು ಹತ್ಯೆ

Murder

ಫರಿದಾಬಾದ್: ಹಾಡಹಗಲೇ ಕಾಲೇಜು ಆವರಣದಲ್ಲಿಯೇ ಯುವತಿಯನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಹರ್ಯಾಣದಲ್ಲಿ ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾರಿನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಯುವತಿಯನ್ನು ಅಪಹರಿಸಲು ಯತ್ನಿಸಿದ್ದರು. ಆದರೆ ಅದಕ್ಕೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ಪಾಯಿಂಟ್ ಬ್ಲ್ಯಾಂಕ್ ರೇಂಜ್ ನಲ್ಲಿ ಗುಂಡಿಟ್ಟು ಹತ್ಯೆಗೈದಿರುವ ದೃಶ್ಯ ವಿಡಿಯೋದಲ್ಲಿ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ದೆಹಲಿಯಿಂದ 30 ಕಿಲೋ ಮೀಟರ್ ದೂರದಲ್ಲಿರುವ ಹರ್ಯಾಣದ ಫರಿದಾಬಾದ್ ನ ಬಲ್ಲಾಬ್ ಗಢ್ ಕಾಲೇಜಿನ ಹೊರಭಾಗ ದಲ್ಲಿ ಈ ಕೊಲೆ ಕೃತ್ಯ ನಡೆದಿದೆ. ನಿಖಿತಾ ಟೋಮರ್ ಅಂತಿಮ ವರ್ಷದ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದು, ಪರೀಕ್ಷೆ ಬರೆಯಲು ಕಾಲೇಜಿಗೆ ತೆರಳಿದ್ದಳು.

ತೌಸೀಫ್ ಹಾಗೂ ನಿಖಿತಾ ಒಬ್ಬರಿಗೊಬ್ಬರು ಪರಿಚಿತರಾಗಿದ್ದು, 2018ರಲ್ಲಿಯೂ ಆಕೆಯನ್ನು ಕಿಡ್ನಾಪ್ ಮಾಡಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.