Monday, 16th September 2024

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿ ಸಾವು

ಲಖನೌ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಯುವತಿ ಮಂಗಳವಾರ ಸಾವನ್ನಪ್ಪಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಈಕೆಗೆ ಪಾರ್ಶ್ವವಾಯು ಬಡಿದಿತ್ತು. ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅತ್ಯಾಚಾರಕ್ಕೊಳಗಾಗಿ ಕಳೆದ 15 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸಂತ್ರಸ್ತೆ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಸೆಪ್ಟೆಂಬರ್ 14ರಂದು ತಮ್ಮ ದನಗಳಿಗೆ ಮೇವು ತರಲು ಹೋಗಿದ್ದಾಗ ಸಂತ್ರಸ್ತೆಯನ್ನು ಹೊಲಕ್ಕೆ ಎಳೆದೊಯ್ದು ಕಾಮುಕರು ಅತ್ಯಾಚಾರವೆಸಗಿದ್ದರು. ದುಪ್ಪಟ್ಟದಿಂದ ಆಕೆಯನ್ನು ಎಳೆದೊಯ್ದಿದ್ದರಿಂದ ಆಕೆಯ ಬೆನ್ನುಹುರಿಗೆ ತೀವ್ರತರದ ಗಾಯಗಳಾಗಿ ದ್ದವು.

ಇಂದು ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *