Wednesday, 11th December 2024

ಲಾಲ್‍ಕೃಷ್ಣ ಅಡ್ವಾಣಿಗೆ ಅತ್ಯುನ್ನತ ನಾಗರಿಕ ಭಾರತ ರತ್ನ ಪ್ರಶಸ್ತಿ

ವದೆಹಲಿ: ಬಿಜೆಪಿಯ ಸಂಸ್ಥಾಪಕ, ಹಿಂದುತ್ವದ ಪ್ರತಿಪಾದಕ ದೇಶದಲ್ಲಿ ಪಕ್ಷಕ್ಕೆ ಭದ್ರ ನೆಲೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ನಾಯಕ ಮಾಜಿ ಉಪಪ್ರಧಾನಿ ಲಾಲ್‍ಕೃಷ್ಣ ಅಡ್ವಾಣಿ ಅವರಿಗೆ ಅತ್ಯುನ್ನತ ನಾಗರಿಕ ಭಾರತ ರತ್ನ ಪ್ರಶಸ್ತಿ ಲಭಿಸಿದೆ.

ಪ್ರಧಾನಿ ನರೇಂದ್ರಮೋದಿ ಅವರು ತಮ್ಮ ಟ್ವಿಟರ್‍ನಲ್ಲಿ ಇದನ್ನು ಖಚಿತಪಡಿಸಿದ್ದಾರೆ.

ಎಲ್.ಕೆ.ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡುವ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲು ನನಗೆ ತುಂಬ ಸಂತೋಷವಾಗಿದೆ. ಈ ಬಗ್ಗೆ ನಾನು ಅವರೊಂದಿಗೆ ಮಾತನಾಡಿದ್ದೇನೆ ಎಂದು ತಮ್ಮ ಅಕೃತ ಸಾಮಾಜಿಕ ಜಾಲತಾಣನಲ್ಲಿ ಪೋಸ್ಟ್ ಮಾಡಿದ್ದಾರೆ.