ಗೋಹರ್ ಉಪವಿಭಾಗದ ಕಶನ್ ಗ್ರಾಮ ಪಂಚಾಯಿತಿಯ ಜಾಡೋನ್ ಗ್ರಾಮದಲ್ಲಿ ಪಂಚಾಯತ್ ಅಧ್ಯಕ್ಷ ಖೇಮ್ ಸಿಂಗ್ ಅವರ ಮನೆಯಲ್ಲಿ ಭೂ ಕುಸಿತದಿಂದ ಮನೆ ಸೇರಿದಂತೆ ಕುಟುಂಬದ 7 ಜನರು ಅವಶೇಷಗಳಡಿ ಸಮಾಧಿ ಯಾಗಿದ್ದಾರೆ. ತಡರಾತ್ರಿ ಗುಡ್ಡ ಕುಸಿದ ಪರಿಣಾಮ ಕಶನ್ ಪಂಚಾಯತ್ ಅಧ್ಯಕ್ಷ ಖೇಮ್ ಸಿಂಗ್ ಅವರ 2 ಅಂತಸ್ತಿನ ಮನೆಯಲ್ಲಿ ಮಣ್ಣು ಆವರಿಸಿದೆ.
ಮಂಡಿ ಜಿಲ್ಲೆಯಲ್ಲಿ ಹಠಾತ್ ಉಂಟಾದ ಪ್ರವಾಹದಿಂದ ಮನೆಗಳಿಗೆ ನೀರು ನುಗ್ಗಿದ್ದರಿಂದ ಹಲವಾರು ವಾಹನಗಳು ಹಾನಿಗೊಳಗಾಗಿವೆ. ಹಠಾತ್ ಪ್ರವಾಹದ ನಂತರ ಬಾಲ್, ಸದರ್, ಥುನಾಗ್, ಮಂಡಿ ಮತ್ತು ಲಮಾಥಾಚ್‌ನಲ್ಲಿ ಹಲವಾರು ಮನೆಗಳು ಮತ್ತು ಅಂಗಡಿಗಳಿಗೆ ನೀರು ನುಗ್ಗಿದೆ. ರಸ್ತೆಯುದ್ದಕ್ಕೂ ನಿಲ್ಲಿಸಲಾಗಿದ್ದ ಹಲವಾರು ವಾಹನಗಳು ಜಖಂಗೊಂಡಿದ್ದು, ನಿವಾಸಿಗಳು ತಮ್ಮ ಮನೆಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಪತ್ತು ನಿರ್ವಹಣಾ ಇಲಾಖೆಯು ರಾಜ್ಯದಲ್ಲಿ ಆ.25 ರವರೆಗೆ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಭೂಕುಸಿತದ ಎಚ್ಚರಿಕೆ ನೀಡಿದೆ.
ಕಂಗ್ರಾ, ಚಂಬಾ, ಮಂಡಿ, ಕುಲು, ಶಿಮ್ಲಾ, ಸಿರ್ಮೌರ್, ಸೋಲನ್, ಹಮೀರ್ ಪುರ್, ಉನಾ ಮತ್ತು ಬಿಲಾಸ್‌ಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಗಳಲ್ಲಿ ಮಳೆಯ ಪ್ರಮಾಣ ಮುಂದಿನ 24 ಗಂಟೆಗಳಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.