ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆಗಳ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಮಂಗಳವಾರ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರನನ್ನು ಸೇನೆ ವಶಕ್ಕೆ ಪಡೆದಿದೆ.
ಶೋಪಿಯಾನ್ ಜಿಲ್ಲೆಯ ಫಾಲಿಯನ್ ಮಂಡಲ್ ಪ್ರಾಂತ್ಯದಲ್ಲಿ ಉಗ್ರನನ್ನು ವಶಕ್ಕೆ ಪಡೆಯಲಾಗಿದ್ದು, ಈತನಿಂದ ಶಸ್ತ್ರಾಸ್ತ್ರಗಳನ್ನು ಹಾಗೂ ಡ್ರೋನ್ ನಿಂದ ಬಂದಿದ್ದ 1 ಎಕೆ47 ಬಂದೂಕು, ನೈಟ್ ವಿಷನ್ ಡಿವೈಸ್, ಮೂರು ಮ್ಯಾಗಜಿನ್ ಬುಲೆಟ್ ಗಳನ್ನು ಸೇನೆ ವಶಕ್ಕೆ ಪಡೆದಿದೆ ಎನ್ನಲಾಗಿದೆ.
ಶಂಕಾಸ್ಪದ ನಡೆಯನ್ನು ಗಮನಿಸಿದ ಸೇನೆ ಈತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಾನು ಲಷ್ಕರ್ ಉಗ್ರನೆಂದು ಒಪ್ಪಿಕೊಂಡಿದ್ದಾನೆ. ಬಂಧಿತ ಉಗ್ರ ಡ್ರೋನ್ ನಿಂದ ಬಂದಿಳಿದಿದ್ದ ಶಸ್ತ್ರಾಸ್ತ್ರಗಳನ್ನು ಪಡೆಯಲು ಫಾಲಿಯನ್ ಮಂಡಲ್ ಪ್ರಾಂತ್ಯಕ್ಕೆ ಆಗಮಿಸಿದ್ದ ಎಂದು ಸೇನಾ ಮೂಲಗಳು ತಿಳಿಸಿವೆ. ಡ್ರೋನ್ ನಿಂದ ಬಂದಿಳಿದಿದ್ದ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳಲು ನಾನು ಬಂದಿದ್ದೆ ಎಂದು ಹೇಳಿದ್ದಾನೆ ಎನ್ನಲಾಗಿದೆ.