Saturday, 14th December 2024

ಗಾನ ಕೋಗಿಲೆಗೆ ಐಸಿಯುನಲ್ಲೇ ಚಿಕಿತ್ಸೆ

#Lata_Mangeshkar

ಮುಂಬೈ : ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ.

ಜ.8 ರಂದು ಕರೋನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗಾಯಕಿಯನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರು ಐಸಿಯುನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಗಾಯಕಿ ವಕ್ತಾರೆ ಅನುಷಾ ಶ್ರೀನಿವಾಸನ್ ಐಯ್ಯರ್ ಅವರು ಲತಾ ಅವರ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ. ಲತಾ ದೀದಿ ಸದ್ಯ ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ. ಪ್ರತಿ ಸಮದನಿ ಹಾಗೂ ಅವರ ತಂಡ ಚಿಕಿತ್ಸೆ ನೀಡುತ್ತಿದೆ. ಲತಾ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ ಎಂದು ಬರೆದುಕೊಂಡಿದ್ದಾರೆ.