Wednesday, 11th December 2024

ರೈತರ ಮೇಲೆ ಅಶ್ರುವಾಯು, ಲಾಠಿ ಪ್ರಯೋಗ: ಸಿಎಂ ಕಟ್ಟರ್‌ ಭೇಟಿ ರದ್ದು

ಚಂಡೀಗಢ: ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಭೇಟಿ ಹಿನ್ನೆಲೆಯಲ್ಲಿ ಹರಿಯಾಣದ ಕರ್ನಲ್ ಟೋಲ್ ಪ್ಲಾಜಾ ಬಳಿ ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಯೋಗಿಸಿರುವ ವಿಡಿಯೋ ವೈರಲ್ ಆಗಿದೆ.

ಕೆಮಲಾ ಹಳ್ಳಿಯಲ್ಲಿ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳ ಪ್ರಯೋಜನಗಳ ಬಗ್ಗೆ ರೈತರನ್ನುದ್ದೇಶಿಸಿ ಮುಖ್ಯಮಂತ್ರಿ ಮಾತನಾಡಬೇಕಿತ್ತು. ಆದರೆ, ಮುಖ್ಯಮಂತ್ರಿ ಭೇಟಿ ರದ್ದಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಕೆಮಲಾ ಹಳ್ಳಿಗೆ ಬರಲು ಪ್ರಯತ್ನಿಸುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು, ಜಲ ಫಿರಂಗಿ ಪ್ರಯೋಗಿಸಿದ್ದಾರೆ.

ನೂರಾರು ಸಂಖ್ಯೆಯಲ್ಲಿದ್ದ ರೈತರು, ಕೃಷಿ ಕಾನೂನುಗಳನ್ನು ರದ್ದುಪಡಿಸಿ ಎಂಬ ಘೋಷಣೆ ಕೂಗುತ್ತಾ, ಮೆರವಣಿಗೆ ಆರಂಭಿಸಿ ದಾಗ ಪೊಲೀಸರು ಆಶ್ರುವಾಯು ಸಿಡಿಸಿ ಗುಂಪನ್ನು ಚದುರಿಸಿದ್ದಾರೆ. ನಂತರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಲಾಠಿ ಪ್ರಯೋಗಿಸಿದ್ದಾರೆ.