Monday, 4th November 2024

ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ  ಭಾನುವಾರ ಶಂಕುಸ್ಥಾಪನೆ ಮಾಡಿದರು.

ಮೀರತ್‌ನ ಸರ್ಧಾನ ಪಟ್ಟಣದ ಸಲಾವಾ ಮತ್ತು ಕೈಲಿ ಗ್ರಾಮಗಳಲ್ಲಿ ಸುಮಾರು ₹700 ಕೋಟಿ ವೆಚ್ಚದಲ್ಲಿ ವಿಶ್ವವಿದ್ಯಾಲಯವನ್ನು ಸ್ಥಾಪಿಸ ಲಾಗುತ್ತಿದೆ.

ಪ್ರಧಾನಮಂತ್ರಿಯವರ ಗಮನದ ಪ್ರಮುಖ ಕ್ಷೇತ್ರವೆಂದರೆ ಕ್ರೀಡಾ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ದೇಶದ ಎಲ್ಲಾ ಭಾಗಗಳಲ್ಲಿ ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯವನ್ನು ಸ್ಥಾಪಿಸುವುದು. ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯ  ಸ್ಥಾಪನೆಯು ಈ ದೃಷ್ಟಿಕೋನವನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.

ಕ್ರೀಡಾ ವಿಶ್ವವಿದ್ಯಾಲಯವು ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್, ವಾಲಿಬಾಲ್, ಹ್ಯಾಂಡ್‌ಬಾಲ್, ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜುಕೊಳ, ವಿವಿಧೋದ್ದೇಶ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ. ಹಾಲ್, ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಒಳಗೊಂಡಿರಲಿದೆ.

ಶೂಟಿಂಗ್, ಸ್ಕ್ವಾಷ್, ಜಿಮ್ನಾಸ್ಟಿಕ್ಸ್, ವೇಟ್‌ಲಿಫ್ಟಿಂಗ್, ಆರ್ಚರಿ, ಕೆನೋಯಿಂಗ್ ಮತ್ತು ಕಯಾಕಿಂಗ್‌ಗೆ ಸೌಲಭ್ಯಗಳನ್ನು ಹೊಂದಿದ್ದು, 540 ಮಹಿಳೆಯರು ಮತ್ತು 540 ಪುರುಷ ಕ್ರೀಡಾಪಟುಗಳು ಸೇರಿದಂತೆ 1080 ಕ್ರೀಡಾಪಟುಗಳಿಗೆ ತರಬೇತಿ ನೀಡುವ ಸಾಮರ್ಥ್ಯದೊಂದಿಗೆ ಇತರ ಸೌಲಭ್ಯಗಳನ್ನು ಹೊಂದಿದೆ.

ಮೋದಿ ಅವರಿಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಥ್ ನೀಡಿದರು.