Friday, 20th September 2024

ನ.25ರಂದು ನೋಯ್ಡಾ ಅಂತರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಶಂಕುಸ್ಥಾಪನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ, ನ.25ರಂದು ಉತ್ತರ ಪ್ರದೇಶದ ಜೇವರ್‌ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮೂಲಕ ಉತ್ತರ ಪ್ರದೇಶವು ಐದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿದ ಏಕೈಕ ರಾಜ್ಯವಾಗಲಿದೆ.

25ರಂದು ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಅವರು ನೋಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಹಾಕುವರು ಎಂದು ಪ್ರಧಾನಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿಯು ₹ 10,050 ಕೋಟಿ ವೆಚ್ಚದಲ್ಲಿ ಆಗಲಿದೆ.

ಈ ವಿಮಾನ ನಿಲ್ದಾಣವು ವರ್ಷದಲ್ಲಿ 1.2 ಕೋಟಿ ಪ್ರಯಾಣಿಕರಿಗೆ ಸೇವೆ ಒದಗಿಸುವ ಸಾಮರ್ಥ್ಯ ಹೊಂದಿರಲಿದೆ ಮತ್ತು ನಿರ್ಮಾಣ ಕಾಮಗಾರಿ 2024ರ ವೇಳೆಗೆ ಪೂರ್ಣಗೊಳ್ಳಲಿದೆ. ದೆಹಲಿ, ನೊಯಿಡಾ, ಗಾಜಿಯಾಬಾದ್‌, ಅಲೀಗಡ, ಆಗ್ರಾ, ಫರೀದಾ ಬಾದ್‌ ಮತ್ತು ಸುತ್ತಲಿನ ಪ್ರದೇಶಗಳ ಜನರಿಗೆ ಈ ವಿಮಾನನಿಲ್ದಾಣದಿಂದ ಅನುಕೂಲ ಆಗಲಿದೆ ಎಂದು ಕಚೇರಿ ತಿಳಿಸಿದೆ.

ಈಗಾಗಲೇ, ಕುಶಿನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಗೊಂಡಿದೆ. ಅಯೋಧ್ಯೆಯಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣ ಹಂತದಲ್ಲಿದೆ.