Saturday, 23rd November 2024

ಸಾವಿರಕ್ಕಿಂತ ಕೆಳಗಿಳಿದ ಕರೋನಾ ಪ್ರಕರಣ

#corona

ನವದೆಹಲಿ: ಭಾರತದಲ್ಲಿ ಕರೋನಾ ಪ್ರಕರಣ ಮತ್ತಷ್ಟು ಇಳಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೇವಲ 861 ಹೊಸ ಪ್ರಕರಣಗಳು ಪತ್ತೆಯಾಗಿ 6 ಮಂದಿ ಮೃತ ಪಟ್ಟಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,36,132ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಡುವವರ ಸಂಖ್ಯೆ  5,21,691ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,058ಕ್ಕೆ ಇಳಿಕೆಯಾಗಿದೆ

ಕಳೆದ 24 ಗಂಟೆಗಳಲ್ಲಿ 929 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,03,383ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,85,74,18,827 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.