ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಯುವಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಯುವಕರಿಗೆ ಉದ್ಯೋಗಾವ ಕಾಶಗಳನ್ನು ಒದಗಿಸಲು ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಯವರ ಬದ್ಧತೆಯನ್ನು ಪೂರೈಸುವಲ್ಲಿ ‘ರೋಜ್ಗಾರ್ ಮೇಳ’ ಒಂದು ಪ್ರಮುಖ ಹೆಜ್ಜೆಯಾಗಿದೆ.
‘ರೋಜ್ಗಾರ್ ಮೇಳ’ ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಕರಿಗೆ ಅವರ ಸಬಲೀ ಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರ ಭಾಗವಹಿಸುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಪ್ರಧಾನಿಯವರು ಈ ಹಿಂದೆ ಅಕ್ಟೋಬರ್ ನಲ್ಲಿ ‘ರೋಜ್ ಗಾರ್ ಮೇಳ’ಕ್ಕೆ ಚಾಲನೆ ನೀಡಿದ್ದರು. ಅವರು ಸಮಾರಂಭ ವೊಂದರಲ್ಲಿ ಹೊಸದಾಗಿ ನೇಮಕಗೊಂಡ 75,000 ಸಿಬ್ಬಂದಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ್ದರು. ಗುಜರಾತ್ ಮತ್ತು ಹಿಮಾಚಲ ಪ್ರದೇಶವನ್ನು ಹೊರತುಪಡಿಸಿ ದೇಶದ 45 ಸ್ಥಳಗಳಲ್ಲಿ ನಿಯೋಜಿಸಲಾದ ಸಿಬ್ಬಂದಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗುವುದು.