Monday, 25th November 2024

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಲಘು ಭೂಕಂಪ

ಕಾಮ್ಜಾಂಗ್: ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕ ದಲ್ಲಿ 3.4ರಷ್ಟು ತೀವ್ರತೆ ದಾಖಲಾಗಿದೆ.

ಭೂಮಿಯ 10 ಕಿಲೋ ಮೀಟರ್ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಭೂಕಂಪದ ಪರಿಣಾಮ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಇದಕ್ಕೂ ಮುನ್ನ ಕಳೆದ ಬುಧವಾರ ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದತ್ತು. ಇಲ್ಲಿ ಎರಡು ತಿಂಗಳಲ್ಲಿ 3-4 ಬಾರಿ ಭೂಕಂಪನ ಉಂಟಾಗಿದೆ.