ನವದೆಹಲಿ: ಬ್ಲ್ಯಾಕ್ ಫಂಗಸ್ ಚಿಕಿತ್ಸೆಯಲ್ಲಿ ಬಳಸಲಾಗುವ ಲಿಪೊಸೋಮಲ್ ಆಂಫೊಟೆರಿಸಿನ್ ಬಿ ಹೆಚ್ಚುವರಿ 29,250 ಬಾಟಲುಗಳನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಬುಧವಾರ ಹೇಳಿದರು.
ತಮ್ಮ ಟ್ವಿಟ್ಟರ್ ಖಾತೆಯಲ್ಲಿ “ಈ ಚಿಕಿತ್ಸೆಯಲ್ಲಿ ಬಳಸಲಾಗುವ ಲಿಪೊಸೋಮಲ್ ಆಂಫೊಟೆರಿಸಿನ್ ಬಿ ಔಷಧದ ಹೆಚ್ಚುವರಿ 29,250 ಬಾಟಲುಗಳನ್ನು ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಕ್ಕೆ ಹಂಚಿಕೆ ಮಾಡಲಾಗಿದೆ. ಚಿಕಿತ್ಸೆಯಲ್ಲಿರುವ ರೋಗಿಗಳ ಸಂಖ್ಯೆಯನ್ನು ಆಧರಿಸಿ ಹಂಚಿಕೆ ಮಾಡಲಾಗಿದೆ.” ಎಂದಿದ್ದಾರೆ.
ಮೇ 24 ರಂದು ಆಂಫೊಟೆರಿಸಿನ್ ಬಿಯ ಹೆಚ್ಚುವರಿ 19,420 ಬಾಟಲುಗಳನ್ನು ಹಂಚಿಕೆ ಮಾಡಲಾಗಿದ್ದು, 21 ರಂದು ದೇಶಾದ್ಯಂತ 23,680 ಬಾಟಲುಗಳನ್ನು ಸರಬರಾಜು ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.