Sunday, 15th December 2024

ಕೇಂದ್ರ ಸಚಿವ ರಾಮ್‌ವಿಲಾಸ್‌ ಪಾಸ್ವಾನ್’ಗೆ ಹೃದಯ ಶಸ್ತ್ರಚಿಕಿತ್ಸೆ

ನವದೆಹಲಿ: ಕೇಂದ್ರ ಸಚಿವ, ಲೋಕಜನಶಕ್ತಿ ಪಕ್ಷದ ನಾಯಕ ರಾಮ್‌ವಿಲಾಸ್‌ ಪಾಸ್ವಾನ್ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಎದೆ ನೋವಿನ ಕಾರಣ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕಳೆದ ಶನಿವಾರ ದಿಢೀರನೆ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅವರನ್ನು ಪುನಃ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಅಗತ್ಯಬಿದ್ದರೆ ಕೆಲವು ವಾರಗಳ ನಂತರ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು ಎಂದು ಪುತ್ರ ಚಿರಾಗ್ ಟ್ವೀಟ್ ಮಾಡಿ ದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ನಾಯಕರು, ಚಿರಾಗ್‌ ಜತೆ ಮಾತನಾಡಿ, ಪಾಸ್ವಾನ್ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದು ಎಲ್‌ಜೆಪಿ ಮೂಲಗಳು ತಿಳಿಸಿವೆ.