Wednesday, 11th December 2024

ಇಂದು ಎಲ್ ಕೆ ಅಡ್ವಾಣಿ ಜನ್ಮದಿನ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಗಣ್ಯರು ಜನ್ಮದಿನದ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, “ಎಲ್ಕೆ ಅಡ್ವಾಣಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ನಮ್ಮ ರಾಷ್ಟ್ರವನ್ನು ಬಲಪಡಿಸಿದ ಸ್ಮರಣೀಯ ಕೊಡುಗೆಗಳನ್ನು ನೀಡಿದ ಸಮಗ್ರತೆ ಮತ್ತು ಸಮರ್ಪಣೆಗೆ ದಾರಿದೀಪವಾಗಿದ್ದಾರೆ. ಅವರ ದೂರದೃಷ್ಟಿಯ ನಾಯಕತ್ವವು ರಾಷ್ಟ್ರೀಯ ಪ್ರಗತಿ ಮತ್ತು ಏಕತೆಯನ್ನು ಹೆಚ್ಚಿಸಿದೆ” ಎಂದು ಹೇಳಿದ್ದಾರೆ. “ನಾನು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾ ಯುಷ್ಯವನ್ನು ಬಯಸುತ್ತೇನೆ.

ರಾಷ್ಟ್ರ ನಿರ್ಮಾಣದ ಕಡೆಗೆ ಅವರ ಪ್ರಯತ್ನಗಳು 140 ಕೋಟಿ ಭಾರತೀಯರಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ” ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಹಿರಿಯ ನಾಯಕನಿಗೆ ಶುಭ ಹಾರೈಸಿದ್ದಾರೆ ಮತ್ತು 96 ವರ್ಷ ವರ್ಷದ ಅಡ್ವಾಣಿ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ಸ್ಫೂರ್ತಿಯ ಮೂಲವಾಗಿದ್ದಾರೆ ಎಂದು ಹೇಳಿದ್ದಾರೆ.

“ಗೌರವಾನ್ವಿತ ಲಾಲ್ ಕೃಷ್ಣ ಅಡ್ವಾಣಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ಅಡ್ವಾಣಿ ಜೀ ಅವರು ತಮ್ಮ ಅವಿರತ ಶ್ರಮ ಮತ್ತು ಸಂಘಟನಾ ಕೌಶಲ್ಯದಿಂದ ಪಕ್ಷವನ್ನು ಬೆಳೆಸಲು ಮತ್ತು ಕಾರ್ಯಕರ್ತರನ್ನು ಕಟ್ಟಲು ಶ್ರಮಿಸಿದ್ದಾರೆ.

ಬಿಜೆಪಿಯ ಪ್ರಾರಂಭದಿಂದ ಅಧಿಕಾರಕ್ಕೆ ಬರುವವರೆಗೆ ಅಡ್ವಾಣಿ ಜಿ ಅವರು ಅನುಪಮ ಕೊಡುಗೆ ನೀಡಿದ್ದಾರೆ. ಅವರು ಪ್ರತಿಯೊಬ್ಬ ಕಾರ್ಯರ್ತನಿಗೆ ಸ್ಫೂರ್ತಿ. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ” ಎಂದು ಶಾ ಟ್ವೀಟ್ ಮಾಡಿದ್ದಾರೆ. ಲಾಲ್ ಕೃಷ್ಣ ಅಡ್ವಾಣಿ ಎಲ್ಕೆ ಅಡ್ವಾಣಿ ಅವರ ಪೂರ್ಣ ಹೆಸರು.

ಇವರು ನವೆಂಬರ್ 8, 1927ರಲ್ಲಿ ಸ್ವಾತಂತ್ರ್ಯ ಪೂರ್ವ ಭಾರತದ ಸಿಂಧ್ ಪಾಂತ್ಯದ ಗೊರೆಗಾಂವ್ನಲ್ಲಿ ಜನಿಸಿದರು.