Tuesday, 10th September 2024

ಎಲ್.ಕೆ.ಅಡ್ವಾಣಿ ಮತ್ತೆ ಅಪೋಲೋ ಆಸ್ಪತ್ರೆಗೆ ದಾಖಲು

ವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ಮಂಗಳವಾರ ಮತ್ತೆ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಕಳೆದ ತಿಂಗಳ ಆರಂಭದಲ್ಲಿ ಅಡ್ವಾಣಿ ಅವರನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿತ್ತು. ಅಡ್ವಾಣಿ 2002 ರಿಂದ 2004 ರವರೆಗೆ ಭಾರತದ ಉಪ ಪ್ರಧಾನಿಯಾಗಿ ಮತ್ತು 1999 ರಿಂದ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು.

ಮಾರ್ಚಿನಲ್ಲಿ ಅಡ್ವಾಣಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ತಮ್ಮ ನಿವಾಸದಲ್ಲಿ ಸ್ವೀಕರಿಸಿದರು.

ಈ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಕರ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಅಡ್ವಾಣಿ ಅವರ ಕುಟುಂಬ ಉಪಸ್ಥಿತರಿದ್ದರು. ಮೂರನೇ ಸರ್ಕಾರ ರಚಿಸುವ ಮೊದಲು ಪ್ರಧಾನಿ ಮೋದಿ ಅವರು ಅಡ್ವಾಣಿ ಅವರನ್ನು ಭೇಟಿ ಮಾಡಿದ್ದರು.

Leave a Reply

Your email address will not be published. Required fields are marked *