Thursday, 19th September 2024

ಸ್ಥಳೀಯ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

ನವದೆಹಲಿ: ರಾಜಧಾನಿಯಲ್ಲಿ ಸೋಮವಾರ ಶಂಕಿತ ಬಾಂಬ್ ಎಚ್ಚರಿಕೆ ಕರೆ ಬಂದಿದೆ. ಸ್ಥಳೀಯ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ.

ಸ್ಥಳೀಯ ರೈಲು ಹರ್ಯಾಣದಿಂದ ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಬ್ಯಾಗ್ ಕಂಡು ಬಂದಿದೆ. ಬಾಂಬ್ ಬೆದರಿಕೆ ಕರೆ ಬಂದಿದ್ದು, ದೆಹಲಿಯ ಆದರ್ಶ ನಗರ ರೈಲು ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಸದ್ಯ ಚೀಲವನ್ನು ಪರಿಶೀಲಿಸುತ್ತಿದೆ ಎಂದು ಹೇಳಲಾಗಿದೆ.

ಹರ್ಯಾಣದಿಂದ ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ಬರುತ್ತಿದ್ದ ಲೋಕಲ್ ರೈಲಿನಲ್ಲಿ ಸೋಮವಾರ ಬ್ಯಾಗ್ ಪತ್ತೆಯಾಗಿದೆ. ಬ್ಯಾಗ್ ಯಾರದು ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬ್ಯಾಗ್ ಬಗ್ಗೆ ಯಾರಿಗೂ ಮಾಹಿತಿ ತಿಳಿದಿರಲಿಲ್ಲ. ತರಾತುರಿಯಲ್ಲಿ ಬಂದ ಸೈನಿಕರು ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಬಿಗಿ ಭದ್ರತೆ ನೀಡಿದ್ದಾರೆ.