Tuesday, 10th December 2024

ಕೇರಳದಲ್ಲಿ ಮತ್ತೊಮ್ಮೆ ಸಂಪೂರ್ಣ ಲಾಕ್‌ಡೌನ್

#corona

ತಿರುವನಂತಪುರಂ: ಕೇರಳದಲ್ಲಿ ಮತ್ತೆ ಕರೋನಾ ಸೋಂಕು ವೇಗವಾಗಿ ಹೆಚ್ಚುತ್ತಿದ್ದು, ಕೇರಳ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸಿದೆ.

ಜು.31 ಮತ್ತು ಆಗಸ್ಟ್ 1 ರಂದು ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಲಾಗಿದೆ. ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಈ ಅವಧಿಯಲ್ಲಿ ತುರ್ತು ಸೇವೆ ಹೊರತುಪಡಿಸಿ ಎಲ್ಲ ಸೇವೆಗಳು ಬಂದ್ ಆಗಲಿವೆ. ಕೇರಳದಲ್ಲಿ ಕೋವಿಡ್ -19 ರ ಹೊಸ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 2 ದಿನಗಳಿಂದ ರಾಜ್ಯದಲ್ಲಿ ಪ್ರತಿದಿನ 22 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದೆ. ವೈರಸ್‌ನಿಂದ ಮೃತಪಟ್ಟವರ ಸಂಖ್ಯೆ 16457 ಕ್ಕೆ ಏರಿದೆ.

ಕೇರಳದಲ್ಲಿ ಕರೋನಾ ಸೋಂಕಿನ ಪ್ರಮಾಣವು ಶೇ.11.2ರಷ್ಟಾಗಿದೆ. ಕೇರಳದಲ್ಲಿ ಸೋಂಕಿನ ಗ್ರಾಫ್ ಕಳೆದ 4 ವಾರಗಳಿಂದ ನಿರಂತರವಾಗಿ ಹೆಚ್ಚುತ್ತಿದೆ.