Friday, 22nd November 2024

ಕೇರಳದಲ್ಲಿ ಜೂನ್ 9 ರವರೆಗೆ ಲಾಕ್‌ಡೌನ್

ತಿರುವನಂತಪುರ: ಕೇರಳದಲ್ಲಿ ಕೋವಿಡ್‌ ಹರಡುವಿಕೆ ನಿಯಂತ್ರಿಸಲು ಕೇರಳ ಸರ್ಕಾರ ಜೂನ್ 9 ರವರೆಗೆ ರಾಜ್ಯದಾದ್ಯಂತ ಲಾಕ್‌ಡೌನ್ ವಿಸ್ತರಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಲಾಕ್‌ಡೌನ್‌ ವಿಸ್ತರಿಸಿ ಶನಿವಾರ ಆದೇಶ ಹೊರಡಿಸಿದ್ದಾರೆ. ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ಮೇ 8ರಿಂದ ಎರಡು ಬಾರಿ ಲಾಕ್‌ಡೌನ್‌ ಘೋಷಿಸಲಾಗಿತ್ತು. ಮಲಪ್ಪುರಂ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ.

ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಸಾಮಾನ್ಯ ಲಾಕ್‌ಡೌನ್ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.