Friday, 13th December 2024

‘ಭಾರತ್ ಜೋಡೋ ಯಾತ್ರೆ’ಯ ಲೋಗೋ, ಘೋಷಣೆ, ಭಿತ್ತಿಪತ್ರ ಬಿಡುಗಡೆ

ವದೆಹಲಿ: ಸೆಪ್ಟೆಂಬರ್ 7 ರಿಂದ ಆರಂಭವಾಗಲಿರುವ ‘ಭಾರತ್ ಜೋಡೋ ಯಾತ್ರೆ’ಯ ಲೋಗೋ, ಘೋಷಣೆ ಹಾಗೂ ಭಿತ್ತಿಪತ್ರವನ್ನು ಕಾಂಗ್ರೆಸ್ ಪಕ್ಷ ಮಂಗಳವಾರ ಬಿಡುಗಡೆ ಮಾಡಿದೆ.

ಪಕ್ಷದ ಕೇಂದ್ರ ಕಚೇರಿಯಲ್ಲಿ ಜೈರಾಮ್ ರಮೇಶ್, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡರು. ನಂತರ ಮಾತನಾಡಿದ ಜೈ ರಾಮ್ ರಮೇಶ್, ಈ ಸಂಬಂಧ ವೆಬ್ ಸೈಟ್ ಅನ್ನು ಕೂಡಾ ಬಿಡುಗಡೆ ಗೊಳಿಸಲಾಗಿದೆ ಎಂದು ತಿಳಿಸಿದರು.

ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಮುಖಂಡರು ಪಕ್ಷದ ಧ್ವಜವನ್ನು ಬಳಸುವುದಿಲ್ಲ, ಬದಲಿಗೆ ತ್ರಿವರ್ಣ ಧ್ವಜ ಬಳಸಲಿದ್ದಾರೆ ಎಂದು ಎಂದು ದಿಗ್ವಿಜಯ್ ಸಿಂಗ್ ಹೇಳಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ಭಾರತ್ ಜೋಡೋ ಯಾತ್ರೆ ನಡೆಯಲಿದೆ.

12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಮೂಲಕ ಈ ಯಾತ್ರೆ ನಡೆಯಲಿದ್ದು, ನಾಗರಿಕ ಸಮಾಜ ಸಂಸ್ಥೆಗಳು ಮತ್ತು ಸಮಾನ ಮನಸ್ಕರು ಈ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.