Thursday, 12th December 2024

102 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಇಂದಿನಿಂದ

ವದೆಹಲಿ: ಮೊದಲ ಹಂತದಲ್ಲಿ ಏಪ್ರಿಲ್ 19ರಂದು 21 ರಾಜ್ಯಗಳ 102 ಲೋಕಸಭಾ ಕ್ಷೇತ್ರಗಳಿಗೆ ಬುಧವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗ ಲಿದೆ.

ಮೊದಲ ಹಂತದಲ್ಲಿ ಅಂಡಮಾನ್ ಮತ್ತು ನಿಕೋಬಾರ್, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ದೆಹಲಿ, ಹಿಮಾಚಲ ಪ್ರದೇಶ, ಗೋವಾ, ಗುಜರಾತ್, ಕೇರಳ, ತಮಿಳುನಾಡು, ಪಂಜಾಬ್, ತೆಲಂಗಾಣ, ಉತ್ತರಾಖಂಡ ಸೇರಿ ವಿವಿಧ ರಾಜ್ಯಗಳ 102 ಕ್ಷೇತ್ರಗಳಿಗೆ ಚುನಾವಣಾ ಪ್ರಕ್ರಿಯೆ ಇಂದಿನಿಂದ ಆರಂಭ ವಾಗಲಿದೆ.

ಮಾ.27ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಮಾ. 28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಾ. 20 ನಾಮಪತ್ರ ಹಿಂಪಡೆದು ಕೊಳ್ಳಲು ಕೊನೆಯ ದಿನವಾಗಿದೆ. ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಘೋಷಣೆಯಾಗಲಿದೆ.

ಏಪ್ರಿಲ್ 26ರಂದು ಎರಡನೇ ಹಂತ, ಮೇ 7ರಂದು ಮೂರನೇ ಹಂತ, ಮೇ 13 ರಂದು ನಾಲ್ಕನೇ ಹಂತ, ಮೇ 20ರಂದು ಐದನೇ ಹಂತ, ಮೇ 25 ರಂದು 6ನೇ ಹಂತ, ಜೂನ್ 1ರಂದು 7ನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಚುನಾವಣೆ ನಡೆಯಲಿದೆ.