Sunday, 15th December 2024

ಆಟೊರಿಕ್ಷಾಕ್ಕೆ ಲಾರಿ ಡಿಕ್ಕಿ: ಮಕ್ಕಳು ಸೇರಿ ಆರು ಮಂದಿ ಸಾವು

ಹೈದರಾಬಾದ್: ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಶನಿವಾರ ವೇಗವಾಗಿ ಬಂದ ಲಾರಿ ಆಟೊರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಲನಗರ ಚೌರಸ್ತಾದಲ್ಲಿ ಆರು ಮಂದಿ ಪ್ರಯಾಣಿಕರಿದ್ದ ಆಟೊರಿಕ್ಷಾಕ್ಕೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೊದಲ್ಲಿದ್ದವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಲಾರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.