Friday, 13th December 2024

ಲಾರಿ ದಿಢೀರ್​ ಯು-ಟರ್ನ್​, ಕಾರಿಗೆ ಡಿಕ್ಕಿ: ಕುಟುಂಬದ ಆರು ಮಂದಿ ಸಾವು

ಜೈಪುರ: ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಲಾರಿ ದಿಢೀರ್​ ಎಂದು ಯು-ಟರ್ನ್​ ಹೊಡೆದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಅಪಘಾತದ ತೀವ್ರತೆಗೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತರನ್ನು ಮನೀಷ್​ ಶರ್ಮಾ, ಕೈಲಾಶ್​ ಶರ್ಮಾ, ಸತೀಶ್​ ಶರ್ಮಾ, ಅನಿತಾ, ಸಂತೋಷ್​, ಪೂನಂ ಎಂದು ಗುರುತಿಸಲಾಗಿದೆ. ಗಾಯಗೊಂಡಿರು ವವರನ್ನು ಮನನ್​ ಹಾಗೂ ದೀಪಾಲಿ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಲಾರಿಯ ಸಮೇತ ಚಾಲಕ ಪರಾರಿಯಾಗಿದ್ದು, ಈತನ ಹುಡು ಕಾಟಕ್ಕೆ ವಿಶೇಷ ತಂಡವನ್ನು ರಚಿಸಲಾಗಿದೆ.

ಅಪಘಾತಕ್ಕೀಡಾದವರು ಸವಾಯಿ ಮಾಧೋಪುರದಲ್ಲಿರುವ ಗಣೇಶನ ದೇವಸ್ಥಾನಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಇವರು ಚಲಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.