Saturday, 23rd November 2024

ಸಂವೇದಿ ಸೂಚ್ಯಂಕದಲ್ಲಿ 1,158 ಅಂಕಗಳ ಕುಸಿತ: ಲಕ್ಷಾಂತರ ರೂಪಾಯಿ ನಷ್ಟ

ಮುಂಬೈ: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಗುರುವಾರ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಹೂಡಿಕೆದಾರರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಸಂವೇದಿ ಸೂಚ್ಯಂಕ 1,158 ಅಂಕಗಳಷ್ಟು ಕುಸಿತ ಕಂಡಿದ್ದು, 59.984.70 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆ ಗೊಳಿಸಿದೆ. ಎನ್ ಎಸ್ ಇ ನಿಫ್ಟಿ 353.70 ಅಂಕಗಳಷ್ಟು ಇಳಿಕೆಯಾಗಿದ್ದು, 17,857.30 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.

ಅದಾನಿ ಪೋರ್ಟ್ಸ್, ಐಟಿಸಿ, ಒಎನ್ ಜಿಸಿ, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ.

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಅಕ್ಟೋಬರ್ ತಿಂಗಳಿನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ ಇದೇ ಮೊದಲ ಬಾರಿ 18,000ಗಡಿಯನ್ನು ದಾಟಿತ್ತು.