Thursday, 12th December 2024

20 ಎಲ್‌ಪಿಜಿ ಸಿಲಿಂಡರ್‌ಗಳ ಸ್ಫೋಟ: 66 ಗುಡಿಸಲುಗಳು ಬೆಂಕಿಗಾಹುತಿ

ಗುವಾಹಟಿ: ಗುವಾಹಟಿಯಲ್ಲಿ 20 ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಸಂಭವಿಸಿದ ಅನಾಹುತ ದಲ್ಲಿ 66 ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

ನಗರದ ಜಲುಕ್‌ಬರಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಒಂದು ಗುಡಿಸಲಿನ್ಲಲಿ ಬೆಂಕಿ ಕಾಣಿಸಿಕೊಂಡ ನಂತರ ಅದು ಇತರೆ ಗುಡಿಸಲುಗಳಿಗೆ ಹರಡಿತ್ತು. ಮನೆಗಳಲ್ಲಿ ಇರಿಸಲಾಗಿದ್ದ ಎಲ್‌ಪಿಜಿ ಸಿಲಿಂಡರ್‌ಗಳು ಒಂದರ ಬಳಿಕ ಒಂದರಂತೆ ಸ್ಫೋಟ ಗೊಂಡಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ತನಿಖೆಗೆ ಆದೇಶ ಹೊರಡಿಸಲಾಗಿದೆ. 14 ಅಗ್ನಿ ಶಾಮಕ ವಾಹನಗಳು ಸುಮಾರು ಮೂರು ಗಂಟೆಗಳಷ್ಟು ಕಾಲ ನಡೆಸಿದ ನಿರಂತರ ಪ್ರಯತ್ನದ ಬಳಿಕ ಬೆಂಕಿ ನಂದಿಸಲು ಯಶಸ್ವಿಯಾಗಿದೆ.