Wednesday, 11th December 2024

ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂ. ಹೆಚ್ಚಳ

lpg price hike

ನವದೆಹಲಿ : ಇಂದಿನಿಂದಲೇ ಜಾರಿಗೆ ಬರುವಂತೆ ದೆಹಲಿ, ಮುಂಬೈ ಮತ್ತು ಇತರ ನಗರಗಳಲ್ಲಿ 14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಹೆಚ್ಚಿಸಲಾಗಿದೆ.

ಕಳೆದ ವಾರ ಸರ್ಕಾರವು ಡೀಸೆಲ್ ಬೆಲೆಯನ್ನು ಲೀಟರ್‌ಗೆ 25 ರೂಪಾಯಿಗಳಷ್ಟು ಹೆಚ್ಚಿಸಿದೆ. ಜನವರಿಯಿಂದ ವಿಮಾನ ಇಂಧನ ವು ಶೇ. 50 ರಷ್ಟು ಹೆಚ್ಚಾಗಿದೆ. ಬರೋಬ್ಬರಿ 137 ದಿನಗಳ ನಂತರ ತೈಲ ಕಂಪನಿಗಳು ಗ್ರಾಹಕರ ಜೇಬಿಗೆ ಕತ್ತರಿ ಹಾಕಿವೆ.

ಪೆಟ್ರೋಲ್‌, ಡೀಸೆಲ್‌ ಲೀಟರ್‌ಗೆ ತಲಾ 80 ಪೈಸೆ ಏರಿಕೆ ಮಾಡಿವೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.21 ರೂ. ಆಗಿದ್ದು, ಡೀಸೆಲ್‌ಗೆ 87.47 ರೂಪಾಯಿ, ಮುಂಬೈನಲ್ಲಿ ಪೆಟ್ರೋಲ್ ಲೀಟರ್‌ಗೆ 110.78 ರೂ.ಇದ್ದರೆ, ಡೀಸೆಲ್ ಪ್ರತಿ ಲೀಟರ್‌ಗೆ 94.94 ರೂಪಾಯಿ ನೀಡಬೇಕು.