Saturday, 14th December 2024

ನಾಳೆ ಮಧ್ಯಪ್ರದೇಶ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ

ಭೋಪಾಲ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಮೋಹನ್ ಯಾದವ್ ಅವರು ಡಿ.13 ರಂದು ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬುಧವಾರ ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಸಂಜೆ ಯಾದವ್ ಅವರು ರಾಜಭವನಕ್ಕೆ ತೆರಳಿ, ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರನ್ನು ಭೇಟಿ ಮಾಡಿ, ಮುಂದಿನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.
ನಿರ್ಗಮಿತ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಪಕ್ಷದ ರಾಜ್ಯ ಮುಖ್ಯಸ್ಥ ವಿಡಿ ಶರ್ಮಾ ಮತ್ತು ಮೂವರು ಕೇಂದ್ರ ವೀಕ್ಷಕರು ಸಹ ರಾಜಭವನಕ್ಕೆ ತೆರಳಿದ್ದರು ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.