Thursday, 21st November 2024

ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಸಿಬ್ಬಂದಿ ಸಾವು

ಭೋಪಾಲ್: ವಿಧಾನಸಭಾ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಮಧ್ಯ ಪ್ರದೇಶ ಸರ್ಕಾರದಉದ್ಯೋಗಿಯೊಬ್ಬರು ಗುರುವಾರ ರಾಜ್ಯದ ಬೆತುಲ್ ಪಟ್ಟಣದಲ್ಲಿ ಎದೆನೋವಿನಿಂದಾಗಿ ಸಾವಿಗೀಡಾಗಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಶುಕ್ರವಾರ ನಡೆಯಲಿದೆ. ಬಾಲಕಿಯರ ಶಾಲೆಯ ಮತಗಟ್ಟೆ ಸಂಖ್ಯೆ 123ರಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಭೀಮ ರಾವ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಎಂಪಿ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ವಿಭಾಗದಲ್ಲಿ ವಾಚ್ಮನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಮುಲ್ತಾಯಿ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ತೃಪ್ತಿ ಪಟೇರಿಯಾ ತಿಳಿಸಿದರು. ಸಂತ್ರಸ್ತರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ವೇಳೆ ಅವರು ಮೃತಪಟ್ಟಿದ್ದಾರೆ.

ಶುಕ್ರವಾರ ಬೆಳಗ್ಗೆ 7 ಗಂಟೆಗೆ ಮಧ್ಯ ಪ್ರದೇಶದ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ರಾಜ್ಯಾದ್ಯಂತ 64,523 ಮತಗಟ್ಟೆಗಳಿವೆ.