Sunday, 15th December 2024

ನಾನು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

ಭೋಪಾಲ್ದ್ವೇಷದ ರಾಜಕಾರಣ ಮಾಡುವುದರಲ್ಲಿ ನನಗೆ ನಂಬಿಕೆಯಿಲ್ಲ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕರಾದ ಕಮಲ್ ನಾಥ್ ಮತ್ತು ದಿಗ್ವಿಜಯ ಸಿಂಗ್ ವಿರುದ್ಧ ನನಗೆ ಯಾವುದೇ ದ್ವೇಷವಿಲ್ಲ ಎಂದು ಹೇಳಿದ್ದಾರೆ.

ನಾನು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಎಂದಿಗೂ ಇಲ್ಲ. ನನಗೆ ಆ ವ್ಯಾಮೋಹವೂ ಇಲ್ಲ. ಮಧ್ಯಪ್ರದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸು ವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತೇನೆ ಎಂದಿದ್ದಾರೆ. ಖಾಸಗಿ ಸುದ್ದಿವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಸಿಂಧಿಯಾ ಮುಖ್ಯಮಂತ್ರಿ ಹುದ್ದೆಯ ಮಹತ್ವಾಕಾಂಕ್ಷೆಯ ಬಗ್ಗೆ ಮಾತನಾಡುತ್ತಾ ‘ ನಾನು ಯಾವತ್ತೂ ಮುಖ್ಯಮಂತ್ರಿ ಕುರ್ಚಿಯ ರೇಸ್‌ನಲ್ಲಿ ಇರಲಿಲ್ಲ.

ನಾನು 2018 ರ ಮಧ್ಯಪ್ರದೇಶ ಚುನಾವಣೆಯಲ್ಲಿ ಸಾಕಷ್ಟು ಶ್ರಮಿಸಿದ್ದೇನೆ. ಫಲಿತಾಂಶಗಳು ಪ್ರಕಟವಾದ ನಂತರ ಕಮಲ್ ನಾಥ್ ಅವರನ್ನು ಮುಖ್ಯಮಂತ್ರಿ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿತು. ನಾನು ಸಹ ಈ ನಿರ್ಧಾರವನ್ನು ಬೆಂಬಲಿಸಿದೆ. ನಾನು ಎಂದಿಗೂ ಸಿಎಂ ಅಭ್ಯರ್ಥಿಯಾಗಿರಲಿಲ್ಲ’ ಎಂದರು.