Thursday, 12th December 2024

ಮಧ್ಯಪ್ರದೇಶದಲ್ಲಿ ದಿ ಕೇರಳ ಸ್ಟೋರಿ ಚಿತ್ರಕ್ಕೆ ತೆರಿಗೆ ವಿನಾಯಿತಿ

ಭೋಪಾಲ್: ಮಧ್ಯ ಪ್ರದೇಶದಲ್ಲಿ ದಿ ಕೇರಳ ಸ್ಟೋರಿ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವು ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಶನಿವಾರ ಘೋಷಿಸಿದ್ದಾರೆ.
“ನಾವು ಈಗಾಗಲೇ ಮಧ್ಯಪ್ರದೇಶದಲ್ಲಿ ಧಾರ್ಮಿಕ ಮತಾಂತರದ ವಿರುದ್ಧ ಕಾನೂನು ಜಾರಿ ಮಾಡಿದ್ದೇವೆ. ಈ ಚಿತ್ರವು ಜಾಗೃತಿ ಮೂಡಿಸುತ್ತದೆ. ಪ್ರತಿಯೊಬ್ಬರೂ ಈ ಚಿತ್ರವನ್ನು ನೋಡ ಬೇಕು. ಪೋಷಕರು, ಮಕ್ಕಳು ಮತ್ತು ಹೆಣ್ಣುಮಕ್ಕಳು ಇದನ್ನು ನೋಡಬೇಕು.

ಅದಕ್ಕಾಗಿಯೇ ಮಧ್ಯಪ್ರದೇಶ ಸರ್ಕಾರ ದಿ ಕೇರಳ ಸ್ಟೋರಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸುತ್ತಿದೆ” ಎಂದು ಚೌಹಾಣ್ ಹೇಳಿದ್ದಾರೆ.

‘ಲವ್ ಜಿಹಾದ್’, ಧಾರ್ಮಿಕ ಮತಾಂತರ ಮತ್ತು ಭಯೋತ್ಪಾದನೆಯ ಪಿತೂರಿಗಳು ಮತ್ತು ಅದರ “ಭೀಕರ” ಮುಖವನ್ನು ಈ ಚಿತ್ರ ಬಹಿರಂಗಪಡಿಸುತ್ತದೆ ಎಂದು ಮಧ್ಯ ಪ್ರದೇಶ ಸಿಎಂ ಹೇಳಿದ್ದಾರೆ.