ಮುಂಬೈ: ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಆರು ರಾಜ್ಯ ಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಮಹಾರಾಷ್ಟ್ರ ಸರ್ಕಾರ ಘೋಷಣೆ ಮಾಡಿದೆ.
ಕೇರಳ, ಗೋವಾ, ರಾಜಸ್ಥಾನ, ಗುಜರಾತ್, ದೆಹಲಿ ಮತ್ತು ಉತ್ತರಖಾಂಡ್ ರಾಜ್ಯಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಘೋಷಿಸ ಲಾಗಿದೆ ಎಂದು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರಕ್ಕೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಕರೋನಾ ನೆಗಿಟಿವ್ ವರದಿ ತರಬೇಕು ಎಂದು ಸೂಚಿಸಲಾಗಿದೆ. ರೈಲಿನ ಮೂಲಕ ಮಹಾರಾಷ್ಟ್ರಕ್ಕೆ ಆಗಮಿಸುವವರು 48ಗಂಟೆಗೂ ಮುನ್ನ ನೆಗೆಟಿವ್ ವರದಿ ಪಡೆದುಕೊಂಡಿರಲೇಬೇಕು ಎಂದು ಆದೇಶ ಹೊರಡಿಸಲಾಗಿದೆ.
ರೂಪಾಂತರಿ ವೈರಾಣು ಮಹಾರಾಷ್ಟ್ರಕ್ಕೆ ಬಂದರೆ ಈಗಾಗಲೇ ಕರೋನಾ ಸೋಂಕಿನಿಂದ ತತ್ತರಿಸಿ ಹೋಗಿರುವ ಇಲ್ಲಿನ ಸ್ಥಿತಿ ಮತ್ತಷ್ಟು ಬಿಗಾಡಾಯಿಸಬಹುದು ಎಂಬ ಹಿನ್ನಲೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.