Thursday, 12th December 2024

ಪಲ್ಘಾರ್‌ ಅಗ್ನಿ ದುರಂತದ ಕುರಿತು ಉಡಾಫೆಯಾಗಿ ಉತ್ತರಿಸಿದ ಆರೋಗ್ಯ ಸಚಿವ

ಮುಂಬೈ: ಮಹಾರಾಷ್ಟ್ರ ರಾಜ್ಯದ ಪಲ್ಘಾರ್​ ಜಿಲ್ಲೆಯ ವಾಸೈನಲ್ಲಿರುವ ಕೋವಿಡ್​ ಕೇಂದ್ರದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ 13 ಜನ ಕೋವಿಡ್ ಸೋಂಕಿತರು ಸಜೀವ ದಹನವಾದ ಘಟನೆ ಬಗ್ಗೆ ಮಹಾರಾಷ್ಟ್ರ ಆರೋಗ್ಯ ಸಚಿವ ಉಡಾಫೆಯ ಉತ್ತರ ನೀಡಿದ್ದಾರೆ.

ಬೆಂಕಿ ಅವಘಡ ಅದೇನು ರಾಷ್ಟ್ರೀಯ ಸುದ್ದಿಯಲ್ಲ. ನಾವೆಲ್ಲ ನೋಡಿ ಕೊಳ್ಳುತ್ತೇವೆ ಬಿಡಿ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ. ಟೋಪೆ ಹೇಳಿಕೆ ಕುರಿತು ಮಹಾರಾಷ್ಟ್ರದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದೇವೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟೋಪೆ ಹೇಳಿದ್ದಾರೆ. ಘಟನೆಯಲ್ಲಿ ಮೃತಪಟ್ಟವರಿಗೆ ಐದು ಲಕ್ಷ ರೂ ಪರಿಹಾರ ಘೋಷಿಸ ಲಾಗಿತ್ತು. ಇದೀಗ ಮತ್ತೆ ಐದು ಲಕ್ಷ ರೂಪಾಯಿ ಹೆಚ್ಚುವರಿ ಪರಿಹಾರವನ್ನು ಘೋಷಿಸಲಾಗಿದೆ.

ವಿರಾರ್ ಪಶ್ಚಿಮದಲ್ಲಿರುವ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ 15 ರೋಗಿಗಳು ಐಸಿಯುನಲ್ಲಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಎಸಿ ಶಾರ್ಟ್​ ಸೆರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಹೇಳಲಾಗಿದೆ.