ಪಣಜಿ: ಮಹದಾಯಿ ವಿವಾದದಲ್ಲಿ ಕರ್ನಾಟಕ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಗೋವಾ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಿದೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಈ ಕುರಿತು, ಮಹದಾಯಿ ನದಿ ನೀರನ್ನು ತಿರುಗಿಸಿ ಕೊಂಡಿರುವ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿ ದ್ದಾರೆ.
2002 ರಿಂದ 2020ರ ತನಕ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಮಹದಾಯಿ ವಿವಾದವಿದೆ. 2006-07ರಲ್ಲಿ ಕಾಂಗ್ರೆಸ್ ಸರ್ಕಾರ ಅಣೆಕಟ್ಟು ಕಟ್ಟಲು ಅನುಮತಿ ನೀಡಿತು ಎಂದು ಸಾವಂತ್ ಹೇಳಿಕೆ ನೀಡಿದ್ದಾರೆ.
ಮಹದಾಯಿ ನ್ಯಾಯಾಧೀಕರಣ ಮೂರು ರಾಜ್ಯಗಳಿಗೆ ನದಿ ನೀರನ್ನು ಹಂಚಿಕೆ ಮಾಡಿದೆ. ಆದರೆ, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರಗಳು ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್’ಗೆ ಅರ್ಜಿ ಸಲ್ಲಿಸಿವೆ. ಪ್ರಸ್ತುತ ಕರ್ನಾಟಕ ಮತ್ತು ಗೋವಾದಲ್ಲಿ ಬಿಜೆಪಿ ಸರ್ಕಾರವೇ ಇದೆ. ಆದರೆ, ಗೋವಾ ಸರ್ಕಾರ ಕರ್ನಾಟಕದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ ಮಾಡಲು ಮುಂದಾ ಗಿದೆ.