Thursday, 12th December 2024

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ವಿಜಯಿ

ಮುಂಬೈ: ಕಾಂಗ್ರೆಸ್ ಅಭ್ಯರ್ಥಿ ಜಯಶ್ರೀ ಜಾಧವ್ ಅವರು ಕೊಲ್ಲಾಪುರ ಉತ್ತರ ವಿಧಾನಸಭಾ ಉಪಚುನಾವಣೆಯಲ್ಲಿ  19,000 ಕ್ಕೂ ಅಧಿಕ ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

ಶನಿವಾರ ನಡೆದ ಮತ ಎಣಿಕೆಯಲ್ಲಿ 19,000 ಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿಜಯಶಾಲಿಯಾಗಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಿಧನರಾದ ಕಾಂಗ್ರೆಸ್ ಶಾಸಕ ಚಂದ್ರಕಾಂತ್ ಜಾಧವ್ ಅವರ ಪತ್ನಿ ಜಯಶ್ರೀ ಜಾಧವ್ ಅವರು ಬಿಜೆಪಿಯ ಸತ್ಯಜಿತ್ ಕದಮ್ ಅವರನ್ನು ಸೋಲಿಸಿದರು.

ಛತ್ತೀಸ್‌ಗಢದ ಖೈರಗಢ ವಿಧಾನಸಭಾ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ನ ಯಶೋದಾ ನಿಲಂಬರ್ ವರ್ಮಾ ಅವರು 20,000 ಮತಗಳ ಅಂತರದಿಂದ ಮುಂದಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಜನತಾ ಕಾಂಗ್ರೆಸ್ ಛತ್ತೀಸ್‌ಗಢ (ಜೋಗಿ) ಶಾಸಕ ದೇವವ್ರತ್ ಸಿಂಗ್ ಅವರ ನಿಧನದಿಂದ ಉಪಚುನಾವಣೆ ಅನಿವಾರ್ಯವಾಗಿತ್ತು.