Sunday, 15th December 2024

Maharashtra oath Ceremony: ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್‌ ಪ್ರಮಾಣ ವಚನ

maharashtra

ಮುಂಬೈ: ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್‌(Devendra Fadnavis) ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ(Maharashtra oath ceremony). ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿರುವ ತಾರಾ ಮಹೋತ್ಸವದಲ್ಲಿ ದೇವೇಂದ್ರ ಫಡ್ನವೀಸ್ ಹಾಗೂ ಉಪ ಮುಖ್ಯಮಂತ್ರಿಗಳಾಗಿ ಏಕನಾಥ್‌ ಶಿಂಧೆ ಮತ್ತು ಎನ್‌ಸಿಪಿಯ ಅಜಿತ್‌ ಪವಾರ್‌ ಪ್ರಮಾಣ ವಚನ ಸ್ವೀಕರಿಸಿದರು.

ಗಣ್ಯರ ಉಪಸ್ಥಿತಿ

ಇನ್ನು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವರಾದ ಅಮಿತ್ ಶಾ, ಜೆಪಿ ನಡ್ಡಾ ಮತ್ತು ನಿತಿನ್ ಗಡ್ಕರಿ ಉಪಸ್ಥಿತರಿದ್ದರು. ಅಲ್ಲದೆ, ಬಾಲಿವುಡ್‌ ನಟರಾದ ಸಲ್ಮಾನ್‌ ಖಾನ್‌, ಶಾರುಖ್ ಖಾನ್, ರಣವೀರ್ ಸಿಂಗ್, ರಣಬೀರ್ ಕಪೂರ್, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಕೂಡ ಭಾಗಿಯಾಗಿದ್ದರು.

ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ ನೂತನ ಸಿಎಂ ಮತ್ತು ಡಿಸಿಎಂಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದು, ದೇವೇಂದ್ರ ಫಡ್ನವೀಸ್ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಮೊದಲ ಬಾರಿಗೆ ಅಕ್ಟೋಬರ್ 2014 ರಿಂದ ನವೆಂಬರ್ 2019 ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು, 44 ನೇ ವಯಸ್ಸಿನಲ್ಲಿ ರಾಜ್ಯದ ಅತ್ಯಂತ ಕಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆದಾಗ್ಯೂ, ನವೆಂಬರ್ 23 ರಿಂದ 28, 2019 ರವರೆಗೆ ಕೇವಲ ಐದು ದಿನಗಳ ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

ಈ ಸುದ್ದಿಯನ್ನೂ ಓದಿ: Eknath Shinde: ಮಹಾರಾಷ್ಟ್ರ ಸಿಎಂ ಯಾರಾಗ್ತಾರೆ ಎನ್ನುವ ಕುತೂಹಲಕ್ಕೆ ಶೀಘ್ರದಲ್ಲೇ ಉತ್ತರ; ಇಂದೇ ಅಂತಿಮ ನಿರ್ಧಾರ ಪ್ರಕಟಿಸ್ತಾರ ಶಿಂಧೆ?