ಮುಂಬೈ: ಮಹಾರಾಷ್ಟ್ರದ (Maharashtra Accident)ದಲ್ಲಿ ಬಸ್ಸೊಂದು ಪಲ್ಟಿಯಾಗಿದ್ದು, 12ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭಂಡಾರಾದಿಂದ ಗೊಂಡಿಯಾಕ್ಕೆ ತೆರಳುತ್ತಿದ್ದ ಬಸ್ ಜಿಲ್ಲೆಯ ಬಿಂದ್ರವನ ತೋಲಾ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇನ್ನು ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ (Maharashtra Tragedy).
ಬಸ್ಸು ಭಂಡಾರಾ ಡಿಪೋದಿಂದ ಗೊಂಡಿಯಾಗೆ ತೆರಳುತ್ತಿದ್ದಾಗ ಟೋಲಾ ಗ್ರಾಮದ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತವಾದ ಸ್ಥಳದಲ್ಲಿಯೇ ಎಂಟು ಮಂದಿ ಮೃತ ಪಟ್ಟಿದ್ದರೆ ಆಸ್ಪತ್ರೆಗೆ ಸಾಗಿಸುವಾಗ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 30 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಗೊಂಡಿಯಾ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
#WATCH | Gondia, Maharashtra | A State transport bus met with an accident after it lost control and overturned near Bindravana Tola village in the Gondia district. So far, 7 people have died. Around 30 people are injured and the injured have been shifted to Gondia District… pic.twitter.com/WZ8mrrv70D
— ANI (@ANI) November 29, 2024
ಸಂತ್ರಸ್ತರಿಗೆ ₹10 ಲಕ್ಷ ಪರಿಹಾರ ಘೋಷಣೆ
ಮುಖ್ಯಮಂತ್ರಿಗಳ ಕಚೇರಿ (ಸಿಎಂಒ)ದ ಮಾಹಿತಿಯ ಪ್ರಕಾರ, ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮೃತರ ಕುಟುಂಬಕ್ಕೆ ತಕ್ಷಣ 10 ಲಕ್ಷ ರೂ. ಪರಿಹಾರ ನೀಡುವಂತೆ ಸಾರಿಗೆ ಆಡಳಿತಕ್ಕೆ ಆದೇಶಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಅಪಘಾತದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
गोंदिया जिल्ह्यातील सडक अर्जुनीजवळ शिवशाही एसटी बसच्या झालेल्या अपघातातील मृतांच्या कुटुंबिंयांना एसटी महामंडळामार्फत १० लाख रुपयांची मदत देण्यात येईल, असे मुख्यमंत्री @mieknathshinde यांनी जाहीर केले. अपघाताची घटना अत्यंत दुर्दैवी असून मृतांना भावपूर्ण श्रद्धांजली अर्पण करून…
— CMO Maharashtra (@CMOMaharashtra) November 29, 2024
ಅಪಘಾತದ ಬಗ್ಗೆ ಸಂತಾಪ ಸೂಚಿಸಿರುವ ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಸ್ ಅಪಘಾತದಲ್ಲಿ ಕೆಲ ಪ್ರಯಾಣಿಕರು ಮೃತಪಟ್ಟಿದ್ದು ಅತ್ಯಂತ ದುರದೃಷ್ಟಕರವಾಗಿದೆ. ನಾನು ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡಿರುವ ಜನರು ಅಗತ್ಯಬಿದ್ದರೆ ಕೂಡಲೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಅಗತ್ಯವಿದ್ದಲ್ಲಿ ಅವರನ್ನು ನಾಗ್ಪುರಕ್ಕೆ ಸ್ಥಳಾಂತರಿಸಲು ವ್ಯವಸ್ಥೆ ಮಾಡುವಂತೆ ಗೊಂಡಿಯಾ ಜಿಲ್ಲಾಧಿಕಾರಿಗೂ ತಿಳಿಸಿದ್ದೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
गोंदिया जिल्ह्यातील सडकअर्जुनीनजीक शिवशाही बसचा दुर्दैवी अपघात होऊन काही प्रवाशांचा मृत्यू झाल्याची घटना अतिशय दुर्दैवी आहे. मृतांना मी भावपूर्ण श्रद्धांजली अर्पण करतो. त्यांच्या कुटुंबीयांच्या दु:खात आम्ही सहभागी आहोत.
— Devendra Fadnavis (@Dev_Fadnavis) November 29, 2024
या घटनेत जे लोक जखमी झाले, त्यांना खाजगी रुग्णालयात उपचार…
ಈ ಸುದ್ದಿಯನ್ನೂ ಓದಿ : Viral Video: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗ್ತಿದ್ದ ಮಹಿಳೆಯ ಜೀವ ಕಸಿದ ‘ಯಮಸ್ವರೂಪಿ’ ಕಾರು – ಅಪ್ರಾಪ್ತನಿಂದ ನಡೆಯಿತೇ ಈ ಅಪಘಾತ..!?