Wednesday, 11th December 2024

Maharashtra Violence: ಅಂಬೇಡ್ಕರ್‌ & ಸಂವಿಧಾನಕ್ಕೆ ಅವಮಾನ; ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಹಿಂಸಾಚಾರ

Maharashtra Violence

ಮುಂಬೈ: ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಬುಧವಾರ ಭಾರಿ ಹಿಂಸಾಚಾರ ಭುಗಿಲೆದ್ದಿದೆ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಸಂವಿಧಾನಕ್ಕೆ ಅವಮಾನವಾದರೆ ಸಹಿಸುವುದಿಲ್ಲ(Insult Of Constitution) ಎಂದು ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಪ್ರತಿಮೆಗೆ ಅವಮಾನ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದಾಗ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪ್ರಯತ್ನಪಟ್ಟರು.ಗುಂಪನ್ನು ನಿಯಂತ್ರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಲಾಗಿದೆ (Maharashtra Violence).

ಮಂಗಳವಾರ ಅಪರಿಚಿತ ವ್ಯಕ್ತಿಯೊಬ್ಬ ಪರ್ಭಾನಿ ರೈಲ್ವೇ ನಿಲ್ದಾಣದ ಹೊರಗೆ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯಲ್ಲಿರುವ ಹೊಂದಿದ್ದ ಸಂವಿಧಾನದ ಪ್ರತಿಕೃತಿಯನ್ನು ವಿರೂಪಗೊಳಿಸಿದ್ದಾನೆ. ಇದು ಪ್ರತಿಭಟನಾಕಾರರನ್ನು ಕೆರಳಿಸಿತು.

ವಾಂಚಿತ್ ಬಹುಜನ ಅಘಾಡಿ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಪ್ರತಿಭಟನಾಕಾರರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪರ್ಭಾನಿಯಲ್ಲಿ ಜಾತಿವಾದಿ ಮರಾಠ ದುಷ್ಕರ್ಮಿಗಳು ಬಾಬಾಸಾಹೇಬ್ ಅವರ ಪ್ರತಿಮೆಯಲ್ಲಿನ ಭಾರತದ ಸಂವಿಧಾನ ಪ್ರತಿಯನ್ನು ಧ್ವಂಸಗೊಳಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಬರೆದಿದ್ದಾರೆ.

ಮಂಗಳವಾರ ನಡೆದ ವಿಧ್ವಂಸಕ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ʼʼಇಂದು (ಡಿ. 11) ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಂಗಡಿಯೊಂದರ ಹೊರಗೆ ಪೈಪ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಗುಂಪು ಹಿಂಸಾತ್ಮಕವಾಗುತ್ತಿದ್ದಂತೆ, ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹೊಡೆದು ಅವರನ್ನು ಚದುರಿಸಿದ್ದಾರೆ” ಎಂದು ಹಂಗಾಮಿ ಪೊಲೀಸ್ ವರಿಷ್ಠಾಧಿಕಾರಿ ಯಶವಂತ ಕಾಳೆ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ : Chinmoy Krishna Das: ಬಾಂಗ್ಲಾದಲ್ಲಿ ಹಿಂದೂ ಮುಖಂಡ ಕೃಷ್ಣ ದಾಸ್ ಬಂಧನ ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪ್ರತಿಭಟನೆ