ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಈ ಹಂತದಲ್ಲಿ ನಾವು ಸರಿಯಾದ ರೀತಿಯಲ್ಲಿ ನಾವು ವಿಚಾರಣೆ ಮಾಡಲು ಸಾಧ್ಯವಿಲ್ಲ. ನೀವು ಸಮರ್ಥ ನ್ಯಾಯಾಲಯಕ್ಕೆ ಹೋಗಬೇಕು” ಎಂದು ಸುಪ್ರೀಂ ಕೋರ್ಟ್ ತನ್ನ ಟೀಕೆ ಗಳಲ್ಲಿ ಹೇಳಿದೆ.
1993 ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಪ್ರಕರಣದಲ್ಲಿ 62 ವರ್ಷದ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರನ್ನು ಫೆಬ್ರವರಿ ಯಲ್ಲಿ ಬಂಧಿಸಲಾಯಿತು.
ಕೇಂದ್ರ ತನಿಖಾ ಸಂಸ್ಥೆ ನಡೆಸಿದ ತನಿಖೆಯಲ್ಲಿ ನವಾಬ್ ಮಲಿಕ್ ಅವರನ್ನು ಬಂಧಿಸಿರು ವುದು ಸೇಡಿನ ರಾಜಕೀಯ ಎಂದು ಮಹಾರಾಷ್ಟ್ರದ ಆಡಳಿತಾರೂಢ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಮೈತ್ರಿ ಬಿಜೆಪಿ ವಿರುದ್ಧ ಕಿಡಿ ಕಾರಿದೆ.
ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆ ಅಡಿಯಲ್ಲಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇತ್ತೀಚೆಗೆ ದಾಖಲಿಸಿದ ಎಫ್‌ಐಆರ್ ಆಧರಿಸಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಮಲಿಕ್, ‘ಡಿ-ಗ್ಯಾಂಗ್’ (ದಾವೂದ್ ಗ್ಯಾಂಗ್) ನ ಪ್ರಮುಖ ಸದಸ್ಯನಿಗೆ ಅಕ್ರಮ ಆಸ್ತಿಯನ್ನು ವಶಪಡಿಸಿ ಕೊಳ್ಳಲು ಹಣ ನೀಡಿದ್ದಾರೆ ಎಂದು ಇಡಿ ಆರೋಪಿಸಿದೆ.