ನವದೆಹಲಿ: ಸಂಸತ್ತಿನ(Parliament) ಹೊರಗೆ ಕಾಂಗ್ರೆಸ್(Congress) ಪ್ರತಿಭಟನೆ ವೇಳೆ ತನ್ನನ್ನು ಬಿಜೆಪಿ ಸಂಸದರು ತಳ್ಳಿ ಬೀಳಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಆರೋಪಿಸಿದ್ದಾರೆ. “ಬಿಜೆಪಿ ಸಂಸದರು ನನ್ನನ್ನು ತಳ್ಳಿ ಗಾಯಗೊಳಿಸಿದ್ದಾರೆ, ಸಂಸದರೊಂದಿಗೆ ಸಂಸತ್ನ ಮಕರ ದ್ವಾರವನ್ನು ತಲುಪಿದಾಗ ನನ್ನನ್ನು ಬಿಜೆಪಿ ಸಂಸದರು ತಳ್ಳಿದ ಕಾರಣ ನಾನು ಆಯತಪ್ಪಿ ಕೆಳಗೆ ಬಿದ್ದೆ. ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮೊಣ ಕಾಲುಗಳಿಗೆ ತೀವ್ರ ಗಾಯವಾಗಿದೆ , ಕಾಂಗ್ರೆಸ್ ಸಂಸದರು ಕುರ್ಚಿ ತಂದು ನನ್ನನ್ನು ಕೂರಿಸಿದರು” ಎಂದು ಮಲ್ಲಿಕಾರ್ಜುನ ಖರ್ಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ(Om Birla) ಅವರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
My letter to the Hon’ble @loksabhaspeaker urging to order an inquiry into the incident which is an assault not just on me personally, but on the Leader of the Opposition, Rajya Sabha and the Congress President. pic.twitter.com/gmILQdIDYW
— Mallikarjun Kharge (@kharge) December 19, 2024
ಇಂದು(ಡಿ.19) ಸಂಸತ್ ಭವನದ ಎದುರು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಹೈಡ್ರಾಮಾ ನಡೆಸಿದ್ದಾರೆ. ಮೊನ್ನೆ(ಡಿ.17) ಸಂಸತ್ತಿನಲ್ಲಿ ಅಮಿತ್ ಶಾ ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು,ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇತ್ತ ಬಿಜೆಪಿ ಪಕ್ಷದ ನಾಯಕರು ಅಂಬೇಡ್ಕರ್ ಅವರನ್ನು ಬದುಕಿನುದ್ದಕ್ಕೂ ಅವಮಾನಗೊಳಿಸಿರುವ ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆ ವೇಳೆ ಎರಡೂ ಪಕ್ಷಗಳ ನಾಯಕರು ಮುಖಾಮುಖಿಯಾಗಿದ್ದು ಒಬ್ಬರನ್ನೊಬ್ಬರು ತಳ್ಳಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.(Ambedkar Row)
ಇನ್ನು ತನ್ನನ್ನು ಬಿಜೆಪಿ ಸಂಸದರು ಹಿಡಿದು ತಳ್ಳಿದರು ಎಂದು ಆರೋಪಿಸಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಖರ್ಗೆ “ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮೊಣಕಾಲುಗಳಿಗೆ ಗಾಯವಾಗಿದೆ ,ಕಾಂಗ್ರೆಸ್ ಸಂಸದರು ಕುರ್ಚಿ ತಂದು ನನ್ನನ್ನು ಕೂರಿಸಿದರು. ಬಹಳ ಕಷ್ಟದಿಂದ ಮತ್ತು ನನ್ನ ಸಹೋದ್ಯೋಗಿಗಳ ಬೆಂಬಲದಿಂದ 11 ಗಂಟೆಗೆ ಸದನಕ್ಕೆ ಕುಂಟುತ್ತಾ ಬಂದೆ” ಎಂದು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ತಲೆಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿ ಬೀಳಿಸಿದ್ದರು ಎಂದು ಆರೋಪಿಸಿದ್ದರು. ಮತ್ತೋರ್ವ ಬಿಜೆಪಿ ಸಂಸದ ಮುಖೇಶ್ ರಜಪೂತ್ ಅವರನ್ನು ತಳ್ಳಿ ಬೀಳಿಸಿದು, ಸದ್ಯ ಅವರಿಬ್ಬರನ್ನು ಚಿಕಿತ್ಸೆಗಾಗಿ ಐಸಿಯುಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ತಳ್ಳಿ ಬೀಳೀಸಿದ ಆರೋಪದಡಿ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಬಿಜೆಪಿ ಮುಂದಾಗಿದೆ ಎಂಬ ಮಾಹಿತಿಯಿದೆ.
ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಫುಲ್ ಕ್ಲಾಸ್
ರಾಜ್ಯಸಭೆಯಲ್ಲಿ(Rajyasabha) ಬಿ.ಆರ್ ಅಂಬೇಡ್ಕರ್(BR Ambedkar) ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್(Congress) ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) “ಡಾ. ಅಂಬೇಡ್ಕರ್ ಅವರಿಗೆ ಈ ಹಿಂದೆ ಕಾಂಗ್ರೆಸ್ ಅವಮಾನಿಸಿರುವುದನ್ನು ಸುಳ್ಳುಗಳಿಂದ ಮರೆಮಾಚಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಮಿತ್ ಶಾ ಅವರ ವಿವಾದಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸುದೀರ್ಘವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ. “ಡಾ. ಅಂಬೇಡ್ಕರ್ ಅವರನ್ನು ಅವಮಾನಿಸುವ ಮತ್ತು ಎಸ್‌ಸಿ/ಎಸ್‌ಟಿ ಸಮುದಾಯಗಳನ್ನು ಕಡೆಗಣಿಸುವ ಕಾಂಗ್ರೆಸ್‌ನ ಕರಾಳ ಇತಿಹಾಸವನ್ನು ಸಂಸತ್ತಿನಲ್ಲಿ ನಿನ್ನೆ ಗೃಹ ಸಚಿವ ಅಮಿತ್ ಶಾ ತೆರೆದಿಟ್ಟರು. ಅವರು ಹೇಳಿದ ಸತ್ಯಗಳನ್ನು ಅರಗಿಸಿಕೊಳ್ಳಲಾಗದೆ ಕಾಂಗ್ರೆಸ್ಸಿಗರು ದಿಗ್ಭ್ರಾಂತರಾಗಿದ್ದಾರೆ. ಅದಕ್ಕಾಗಿಯೇ ಅವರು ಈ ರೀತಿಯ ನಾಟಕವಾಡುತ್ತಿದ್ದಾರೆ. ಜನರಿಗೆ ಸತ್ಯವನ್ನು ತಿಳಿಸಿರುವುದರಿಂದ ಕಾಂಗ್ರೆಸ್‌ಗೆ ಅತೀವ ನೋವಾಗಿದೆ” ಎಂದು ವ್ಯಂಗ್ಯವಾಡಿದ್ದಾರೆ.
ಈ ಸುದ್ದಿಯನ್ನೂ ಓದಿ:Ambedkar Row: ಪ್ರತಿಭಟನೆ ವೇಳೆ ಬಿಜೆಪಿ ಸಂಸದರಿಬ್ಬರಿಗೆ ಗಂಭೀರ ಗಾಯ; ICUನಲ್ಲಿ ಚಿಕಿತ್ಸೆ- ರಾಹುಲ್ ಗಾಂಧಿ ತಳ್ಳಿರುವ ಆರೋಪ